spot_img
spot_img

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ. ಇತ್ತೀಚೆಗೆ ತಮಿಳುನಟ ಕಾರ್ತಿ ಕೂಡ ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಲಡ್ಡು ವಿಚಾರ ಬಂದಾಗ ಅದು ಸೆನ್ಸಿಟಿವ್ ವಿಚಾರ ಅದರ ಬಗ್ಗೆ ಮಾತನಾಡುವುದು ಬೇಡ ಎಂದು ಅಪಹಾಸ್ಯ ಮಾಡಿದ್ದರು.

ಇದನ್ನೂ ಓದಿ : ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ಚೆನ್ನೈ: ಸಿನಿಮಾ ಕಾರ್ಯಕ್ರಮವೊಂದರಲ್ಲಿ ತಿರುಪತಿ-ತಿರುಮಲ ಲಡ್ಡು ವಿವಾದದ ಕುರಿತು ಮಾತನಾಡಿದ್ದ ಖ್ಯಾತ ತಮಿಳು ನಟ ಕಾರ್ತಿ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ರನ್ನು ಉಲ್ಲೇಖಿಸಿ ಕ್ಷಮೆ ಕೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ತಿರುಪತಿಯ ಪವಿತ್ರ ಲಡ್ಡು ವಿಚಾರದಲ್ಲಿ ಅಪಹಾಸ್ಯ ಮಾಡಬಾರದು. ನಾವು ನಿಮ್ಮನ್ನು ಕಲಾವಿದರಾಗಿ ಗೌರವಿಸುತ್ತೇವೆ. ಆದರೆ ಮುಖ್ಯವಾಗಿ ಸನಾತನ ಧರ್ಮದ ಬಗ್ಗೆ ಒಂದೇ ಒಂದು ಅಕ್ಷರ ಮಾತನಾಡುವ ಮುನ್ನ ನೂರು ಬಾರಿ ಯೋಚಿಸಿ ಎಂದು ಹೇಳಿದ್ದರು.

ಇದನ್ನೂ ಓದಿ : ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಈ ವಿಚಾರ ವೈರಲ್ ಆಗುತ್ತಲ್ಲೇ ಎಚ್ಚೆತ್ತುಕೊಂಡಿರುವ ನಟ ಕಾರ್ತಿ ಕ್ಷಮೆ ಯಾಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾರ್ತಿ, ‘ಆತ್ಮೀಯ ಪವನ್ ಕಲ್ಯಾಣ್ ಸರ್.. ನಿಮ್ಮ ಬಗ್ಗೆ ನಮಗೆ ತುಂಬಾ ಗೌರವವಿದೆ. ನನ್ನಿಂದ ಉಂಟಾದ ಯಾವುದೇ ಉದ್ದೇಶಪೂರ್ವಕ ತಪ್ಪುಗ್ರಹಿಕೆಗೆ ನಾನು ಕ್ಷಮೆಯಾಚಿಸುತ್ತೇನೆ. ವೆಂಕಟೇಶ್ವರ ಸ್ವಾಮಿಯ ವಿನಮ್ರ ಭಕ್ತನಾಗಿ, ನಾನು ಯಾವಾಗಲೂ ನಮ್ಮ ಸಂಪ್ರದಾಯಗಳನ್ನು ಆತ್ಮೀಯವಾಗಿ ಹಿಡಿದಿಟ್ಟುಕೊಳ್ಳುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...

ಸದ್ಯದಲ್ಲೇ ಬರಲಿದೆ  iPhone SE4 ನಿಮ್ಮ ಬಜೆಟ್ ಬೇಲೆಗೆ.!

ಐಫೋನ್ SE4: ಇತ್ತೀಚೆಗೆ ಆ್ಯಪಲ್​ ಕಂಪನಿ ಬಹುನಿರೀಕ್ಷಿತ ಐಫೋನ್​ 16 ಸರಣಿಯನ್ನು ಪರಿಚಯಿಸಿತ್ತು. ಸದ್ಯ ಮಾರುಕಟ್ಟೆಯಲ್ಲಿ ಮಾರಾಟ ನಡೆಸುತ್ತಿದೆ. ಅನೇಕರು ನೂತನ ಐಫೋನನ್ನು ಕೊಂಡು...