spot_img
spot_img

ತಿರುಪತಿ ಲಡ್ಡು ಸಾಲು: ಆಂಧ್ರ ಪ್ರದೇಶದಿಂದ ವರದಿ ಕೇಳಿದ ಕೇಂದ್ರ ಸರ್ಕಾರ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಈ ಆರೋಪದ ವಿರುದ್ಧ ಕೂಲಂಕುಶ ತನಿಖೆ ನಡೆಸುವ ಅಗತ್ಯವಿದೆ. ಅಲ್ಲದೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ನಡ್ಡಾ ಹೇಳಿದ್ದಾರೆ.

ಹಿಂದೂಗಳ ಖ್ಯಾತ ಪವಿತ್ರ ಯಾತ್ರಾತಾಣ ತಿರುಪತಿ-ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬ ಮಿಶ್ರಣ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆಂಧ್ರ ಪ್ರದೇಶ ಸರ್ಕಾರದಿಂದ ವರದಿ ಕೇಳಿದೆ.

ಇದನ್ನೂ ಓದಿ : ದ್ವಿತೀಯ PUC ವಿದ್ಯಾರ್ಥಿನಿಯರಿಗೆ ಶುಭ ಸುದ್ದಿ; ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಸರ್ಕಾರಿ ಉದ್ಯೋಗಗಳು!

ತಿರುಪತಿ ವೆಂಕಟೇಶ್ವರಸ್ವಾಮಿ ದೇಗುಲದ ಭಕ್ತರಿಗೆ ನೀಡಲಾಗುವ ಲಡ್ಡು ಪ್ರಸಾದ ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂಬ ಆಂಧ್ರಪ್ರದೇಶದ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರ ಆರೋಪದ ಕುರಿತು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ (J.P Nadda) ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಅವರಿಗೆ ವಿವರವಾದ ವರದಿ ಕೇಳಿದ್ದಾರೆ.

ಲಡ್ಡೂಗಳನ್ನು ದೇವಾಲಯಕ್ಕೆ ಭೇಟಿ ನೀಡುವ ಕೋಟಿಗಟ್ಟಲೆ ಭಕ್ತರಿಗೆ ನೀಡಲಾಗುತ್ತದೆ. ಇದರಿಂದಾಗಿ ಸಿಎಂ ಏನೇ ಹೇಳಿದರೂ ಅದು ಗಂಭೀರ ಮತ್ತು ಕಳವಳಕಾರಿ ವಿಷಯವಾಗಿದೆ. ಈ ಆರೋಪದ ವಿರುದ್ಧ ಕೂಲಂಕುಶ ತನಿಖೆ ನಡೆಸುವ ಅಗತ್ಯವಿದೆ. ಅಲ್ಲದೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ನಡ್ಡಾ ಹೇಳಿದ್ದಾರೆ.

ಇದನ್ನೂ ಓದಿ : ಮದಿಹಳ್ಳಿ ದಲಿತ ಪಿಡಿಓ ವರ್ಗಾವಣೆಗೆ ಕಸರತ್ತು ನಡೆಸಿದ ಖತರ್ನಾಕ ಅಧ್ಯಕ್ಷ.!

“ಲಭ್ಯವಿರುವ ವರದಿಯನ್ನು ಹಂಚಿಕೊಳ್ಳಲು ನಾನು ಅವರನ್ನು ಕೇಳಿದ್ದೇನೆ. ಇದರಿಂದ ನಾನು ಅದನ್ನು ಪರಿಶೀಲಿಸಬಹುದು. ನಾನು ರಾಜ್ಯ ನಿಯಂತ್ರಕರೊಂದಿಗೆ ಮಾತನಾಡಿ ಬಳಿಕ ಈ ಬಗ್ಗೆ ತನಿಖೆ ನಡೆಸುತ್ತೇನೆ. ಆಹಾರ ಸುರಕ್ಷತಾ ಮಾನದಂಡಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ ನಾನು ವರದಿ ಕೇಳಿದ್ದು, ಪರಿಶೀಲಿಸುತ್ತೇವೆ ಎಂದು ಹೇಳಿದರು.

ಈ ಹಿಂದೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು, ಈ ಹಿಂದಿನ ಸಿಎಂ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಅವರು ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡು ತಯಾರಿಕೆಗೆ ಬಳಸಿದ ತುಪ್ಪದ ಮಾದರಿಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಈ ಬಗ್ಗೆ ಗುಜರಾತ್‍ನ ಸರ್ಕಾರಿ ಲ್ಯಾಬ್‍ನ ವರದಿಯನ್ನು ಅವರು ಉಲ್ಲೇಖಿಸಿದ್ದರು.

ಇದನ್ನೂ ಓದಿ : ತಿರುಪತಿ ತಿಮಪ್ಪನ ಪ್ರಸಾದದಲ್ಲಿ ಪ್ರಾಣಿಯ ಕೊಬ್ಬು.. ಹೊಸ ಬೇಡಿಕೆಯಿಟ್ಟ ಪವನ್​ ಕಲ್ಯಾಣ್​!

ತನಿಖೆಗೆ ಜೋಶಿ ಆಗ್ರಹ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಸಲು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮಾಡಿರುವ ಆರೋಪದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ.

‘ಚಂದ್ರಬಾಬು ನಾಯ್ಡು ಅವರು ಮಾಡಿರುವ ಆರೋಪ ಕಳವಳಕಾರಿ ವಿಷಯವಾಗಿದೆ. ಈ ಕುರಿತು ಸಮಗ್ರ ತನಿಖೆಯ ಅಗತ್ಯವಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...