ತಿರುಪತಿ: ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಾಲಯದ ಲಡ್ಡುವಿನಲ್ಲಿ ಪ್ರಾಣಿ ಜನ್ಯ ಕೊಂಬಿನಾಂಶ ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ದೇವಾಲಯದಲ್ಲಿ ಶಾಂತಿ ಹೋಮ, ಶುದ್ಧೀಕರಣ ಧಾರ್ಮಿಕ ಚಟುವಟಿಕೆಗಳು ಆರಂಭವಾಗಿವೆ.
ಇದನ್ನೂ ಓದಿ : ಮಿಸ್ ಯೂನಿವರ್ಸ್ ಇಂಡಿಯಾ : 19 ವರ್ಷದ ಯುವತಿ ಈ ಚೆಂದುಳ್ಳಿ ಚೆಲುವೆ ಯಾರು?
ನಾಲ್ಕು ಗಂಟೆಗಳ ಕಾಲ ಶಾಂತಿಯ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.
ತಿರುಪತಿ ತಿರುಮಲ ದೇವಸ್ಥಾನ ಸಮಿತಿ ಆಶ್ರಯದಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೂ ಶಾಂತಿ ಹೋಮ ಪಂಚಗವ್ಯ ಪ್ರೋಕ್ಷಣೆ ನಡೆಸಲಾಗಿದೆ. ಮಧ್ಯಾಹ್ನದವರೆಗೂ ಇನ್ನೂ ಹಲವು ಧಾರ್ಮಿಕ ಶುದ್ದೀಕರಣ ಕಾರ್ಯಗಳು ನಡೆಯಲಿದ್ದು, ಹಲವು ಪ್ರಮುಖರು ಭಾಗಿಯಾಗಿರುವುದಾಗಿ ಟಿಟಿಡಿ ಮೂಲಗಳು ಖಚಿತಪಡಿಸಿವೆ.
ಇದನ್ನೂ ಓದಿ : ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ವಿಶೇಷ ಗಿಫ್ಟ್ ಕೊಟ್ಟಿದ್ದೇನೆ ?
ಈ ಆಚರಣೆಗಳು ಕೆಟ್ಟದನ್ನು ನಿವಾರಿಸುತ್ತದೆ ಮತ್ತು ಭಕ್ತರ ಯೋಗಕ್ಷೇಮದ ಜೊತೆಗೆ ಲಡ್ಡುವಿನ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸುತ್ತದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ಹೇಳಿದ್ದಾರೆ.