ಸರ್ಕಾರಿ ಕಚೇರಿ ಆವರಣಗಳಲ್ಲಿ ಧೂಮಪಾನ ಹಾಗೂ ತಂಬಾಕು ಪದಾರ್ಥಗಳ ಸೇವನೆ ಮತ್ತು ಮಾರಾಟವನ್ನು ನಿಷೇಧಗೊಳಿಸಿ ಸರ್ಕರ ಆದೇಶ ಹೊರಡಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಮಹತ್ವದ ಆದೇಶವನ್ನು ಹೊರಡಿಸಿದ್ದು ಎಲ್ಲಾ ಸರ್ಕಾರಿ ಕಚೇರಿಯ ಆವರಣದಲ್ಲೂ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ತಂಬಾಕು ಸೇವನೆ ಹಾಗೂ ಧೂಮಪಾನ ದಿಂದ ಅನಾರೋಗ್ಯ ಉಂಟಾಗಲಿದ್ದು ಸಾರ್ವಜನಿಕ ಪ್ರದೇಶದಲ್ಲಿ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಸೂಚನೆ ನೀಡಲಾಗಿದೆ.
ನೋಟಿಫಿಕೇಶನ್ ಉಲ್ಲೇಖಿಸಿರುವಂತೆ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ನಿಯಂತ್ರಣ, ಉತ್ಪಾದನೆ, ಸರಬರಾಜು ಮತ್ತು ವಿತರಣೆ) ಕಾಯಿದೆ, 2003 (ಕೇಂದ್ರ ಅಧಿನಿಯಮ 34/2003)ರಲ್ಲಿ ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ(ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ.
ಶಾಸನಾತ್ಮಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿ೦ದ ಹಾಗೂ ಪರೋಕ್ಷ ಧೂಮಪಾನದಿ೦ದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬ೦ದಿಗಳನ್ನು ರಕ್ಷಿಸುವ ಉದ್ದೇಶದಿ೦ದ ಈ ಕ್ರಮ ಕೈಗೊಳ್ಳಲಾಗಿದೆ.
ಸರ್ಕಾರಿ ಕಚೇರಿಗಳು ಅಥವಾ ಆವರಣದಲ್ಲಿ ತಮ್ಮ ಉದ್ಯೋಗಿಗಳು ಸಿಗರೇಟ್ ಸೇದುವುದು ಅಥವಾ ಯಾವುದೇ ತಂಬಾಕು ಉತ್ಪನ್ನಗಳನ್ನು ಸೇವಿಸುವುದನ್ನು ನಿರ್ಬಂಧಿಸಿ ಸರ್ಕಾರವು ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸುತ್ತೋಲೆ ಹೊರಡಿಸಿದೆ. ಯಾವುದೇ ಉದ್ಯೋಗಿಗಳು ಗುಟ್ಕಾ, ಪಾನ್ ಮಸಾಲಾ, ತಂಬಾಕು, ಸಿಗರೇಟ್ ಸೇವಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಟ್ವೀಟ್ ಮಾಡಿದ್ದಾರೆ.
ಸ್ಯಾಚೆಟ್ಗಳು, ಪೌಚ್ಗಳು ಅಥವಾ ಪ್ಯಾಕೇಜುಗಳಲ್ಲಿ ಪ್ಯಾಕ್ ಮಾಡಲಾದ ಗುಟ್ಕಾ ಮತ್ತು ಪಾನ್ ಮಸಾಲಾವನ್ನು 2024 ರ ಮೇ 24 ರಿಂದ ಜಾರಿಗೆ ಬರುವಂತೆ ಇಡೀ ತೆಲಂಗಾಣ ರಾಜ್ಯದಲ್ಲಿ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ.
ಸರ್ಕಾರದ ಈ ಆದೇಶಕ್ಕೆ ಪಾನ್ ಶಾಪ್ ಮಾಲೀಕರಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಲವರು ಒಪ್ಪಿಗೆ ಸೂಚಿಸಿದ್ದರೆ ಮತ್ತೆ ಕೆಲ ಮಾಲೀಕರು ಆದೇಶ ಪಾಲನೆಗೆ ಸಹಕಾರ ನೀಡುತ್ತಿಲ್ಲ ಎನ್ನಲಾಗಿದೆ.
ಆಹಾರ ಸುರಕ್ಷತೆ ಮತ್ತು ಮಾನದಂಡಗಳ (ನಿಷೇಧ ಮತ್ತು ಮಾರಾಟದ ನಿರ್ಬಂಧ) ನಿಯಮಾವಳಿ 2011ರ ನಿಯಮಾವಳಿ 2.3.4ರ ಜೊತೆಗೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಸೆಕ್ಷನ್ 30ರ ಉಪ-ವಿಭಾಗ (2) ರ ಷರತ್ತು (ಎ) ಅಡಿಯಲ್ಲಿ ನಿಷೇಧವನ್ನು ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
https://www.youtube.com/@heyseetaramnews/videos