ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನೌಕರರು ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಂಬಳ ಹೆಚ್ಚಳ ಸೇರಿದಂತೆ ಅರಿಯರ್ಸ್, ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ರಾಜ್ಯ ಸರ್ಕಾರ ಬಿಡುಗಡೆ ಆಗ್ರಹಿಸುತ್ತಿದೆ. ಸಾಮಾನ್ಯವಾಗಿ ಈ ವರ್ಷದ ಆರಂಭದಲ್ಲಿ ಸಾರಿಗೆ ನೌಕರರ ಸಂಬಳವನ್ನು ಹೆಚ್ಚಿಸಬೇಕಿತ್ತು.
ಆದರೆ ನವೆಂಬರ್ ತಿಂಗಳು ಮುಗಿಯುತ್ತಾ ಬಂದರು ಕೂಡ ಈ ಸಂಬಳ ಹೆಚ್ಚಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಸಿಟ್ಟಾದ ಸಾರಿಗೆ ನೌಕರರು ಮುಷ್ಕರ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಸಂಬಳ ಹೆಚ್ಚಳ ಸೇರಿದಂತೆ, ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರೂಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿ ರೂಪಾಯಿ ನೀಡಬೇಕಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಪ್ರತಿಕ್ರಿಯಿಸಿದ್ದು ಮುಷ್ಕರವನ್ನು ಹಿಂಪಡೆಯುವ ಮಾತೇ ಇಲ್ಲ, ನಮ್ಮ ಬೇಡಿಕೆ ಈಡೇರುವವರೆಗೆ ಮುಷ್ಕರ ನಿಲ್ಲಿಸುವ ಮಾತೇ ಇಲ್ಲ. ಈ ಬಗ್ಗೆ ಸರ್ಕಾರ ಕೂಡ ಯಾವುದೇ ಆಸಕ್ತಿ ತೋರುತ್ತಿಲ್ಲ ಸದ್ಯದಲ್ಲೇ ದಿನಾಂಕ ಘೋಷಿಸುವುದಾಗಿ ತಿಳಿಸಿದರು.
ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ ಎಂದು ನಾವು ನೌಕರರಿಗೆ ಹೇಳಿದ್ದೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಮುಷ್ಕರ ವಾಪಸ್ಸು ಪಡೆಯಲ್ಲ. ಇದು ಬಹಳ ಸ್ಪಷ್ಟ, ನೌಕರರು ಮುಷ್ಕರಕ್ಕೆ ಸಿದ್ಧರಾಗಿದ್ದಾರೆ.
ನಾವು ಈಗ ಮುಷ್ಕರದ ದಿನಾಂಕ ಘೋಷಣೆ ಮಾಡುವುದಷ್ಟೇ ಬಾಕಿ. ಇಲ್ಲಿಯವರೆಗೆ ನಮಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ದರಾಗಿದ್ದಾರೆ. ನಾವು ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನೀಡಬೇಕಿರುವ 38 ತಿಂಗಳ ಅರಿಯರ್ಸ್, ನಿವೃತ್ತಿಯಾದ ನೌಕರರಿಗೆ ಗ್ರಾಚ್ಯುಟಿ ಹಣ ನೀಡುತ್ತಿಲ್ಲ ಎಂದು ಸಾರಿಗೆ ನೌಕರರು ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಗಳ ಕಾರ್ಯಾಚರಣೆ ನಿಲ್ಲಿಸಿ ಮುಷ್ಕರ ಮಾಡುತ್ತೇವೆ ಎಂಬ ಎಚ್ಚರಿಕೆ ನೀಡಿದ್ದಾರೆ.
ಸದ್ಯದಲ್ಲೇ ದಿನಾಂಕವನ್ನೂ ಘೋಷಣೆ ಮಾಡುತ್ತೇವೆ ಎಂಬ ಎಚ್ಚರಿಕೆ ನೀಡಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಹತ್ತಾರು ಪತ್ರಗಳನ್ನು ಬರೆದಿದ್ದೇವೆ. 38 ತಿಂಗಳ ಅರಿಯರ್ಸ್ ನೀಡಬೇಕು ಎಂದು ಹೇಳಿದ್ದೇವೆ. ಕಳೆದ ತಿಂಗಳ ಮೀಟಿಂಗ್ ನಲ್ಲೂ ನಮ್ಮ ಬೇಡಿಕೆಗಳನ್ನು ಈಡೇರಿಸಲು ಹೇಳಿದ್ದೇವೆ. ಇನ್ನೂ ಸಾರಿಗೆ ನೌಕರರು ತಾಳ್ಮೆಯಿಂದ ಕಾಯುವ ಪರಿಸ್ಥಿತಿಯಲ್ಲಿಲ್ಲ.
ಖಂಡಿತವಾಗಿ ನಾವು ರಾಜ್ಯದ 1.15 ಲಕ್ಷ ಸಾವಿರ ನೌಕರರು ಅನಿವಾರ್ಯವಾಗಿ ನೂರಕ್ಕೆ ನೂರರಷ್ಟು ಮುಷ್ಕರಕ್ಕೆ ಹೋಗುತ್ತೇವೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
38 ತಿಂಗಳ ಅರಿಯರ್ಸ್ ನೀಡಿಲ್ಲ, ಈ ವರ್ಷ ಜನವರಿಯಲ್ಲೇ ವೇತನ ಹೆಚ್ಚಳ ಮಾಡಬೇಕಿತ್ತು, ನವೆಂಬರ್ ಆದರೂ ಈ ಬಗ್ಗೆ ಸರ್ಕಾರ ಮಾತನಾಡುತ್ತಿಲ್ಲ. ಈಗಾಗಲೇ ನೌಕರರು ಮುಷ್ಕರಕ್ಕೆ ಸಿದ್ಧರಾಗ್ತಿದ್ದಾರೆ. ನಾವು ದಿನಾಂಕ ಘೋಷಣೆ ಮಾಡಬೇಕು ಅಷ್ಟೇ, ಎನ್ನುವ ಮೂಲಕ ಸಾರಿಗೆ ನೌಕರರು ಮುಷ್ಕರಕ್ಕೆ ಸಿದ್ಧರಾಗುತ್ತಿರುವ ಬಗ್ಗೆ ಜಂಟಿ ಕ್ರಿಯಾ ಸಮಿತಿ ಮತ್ತೊಮ್ಮೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.