ಮುಂಬೈ: ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ವೊರ್ಲಿ ಕ್ಷೇತ್ರದ ಶಾಸಕ ಆದಿತ್ಯ ಠಾಕ್ರೆ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದೇ ಸಂದರ್ಭದಲ್ಲೇ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ವಾರ್ಷಿಕ ಸಮಾವೇಶ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಗೆ ಕರ್ನಾಟಕ ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಇಂದು ವಿಧಾನ ಭವನದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆದಿತ್ಯ ಠಾಕ್ರೆ, ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಿಂದಾಗಿ ಸಂಭ್ರಮಾಚರಣೆ ನಡೆಯುತ್ತಿದೆ.
ಮತ್ತೊಂದೆಡೆ, ಬೆಳಗಾವಿಯ ಪರಿಸ್ಥಿತಿಯನ್ನು ನೋಡಿ. ನೆರೆಯ ಈ ಪ್ರದೇಶದಲ್ಲಿ ಮರಾಠಿ ಭಾಷಿಕರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದರು.
ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ವೊರ್ಲಿ ಕ್ಷೇತ್ರದ ಶಾಸಕ ಆದಿತ್ಯ ಠಾಕ್ರೆ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬೆಳಗಾವಿ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಮತ್ತು ಗಡಿ ವಿವಾದ ಇತ್ಯರ್ಥವಾಗೋವರೆಗು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿದರು.