ಬೆಂಗಳೂರು : ಮಂಗನ ಕಾಯಿಲೆಗೆ ಅಗತ್ಯ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಣಕಾಸು ನೆರವು ಒದಗಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿಂದು ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಮೊದಲ ಹಂತದಲ್ಲಿ ಮಂಗನ ಕಾಯಿಲೆಗೆ ಲಸಿಕೆ ನೀಡುವ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ನೀಡುವುದು ಅಗತ್ಯ ಹಾಗೂ ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಶೀಘ್ರ ಪ್ರಾರಂಭಿಸಲಾಗುವುದು ಎಂದು ಹೇಳಿದರು.
೨೦೨೫ರ ಏಪ್ರಿಲ್ ತಿಂಗಳಲ್ಲಿ ಲಸಿಕಾ ಪ್ರಯೋಗ ನಡೆಸಲು ಉದ್ದೇಶಿಸಲಾಗಿದ್ದು, ೨೦೨೬ರಲ್ಲಿ ಲಸಿಕೆ ಬಳಕೆಗ ಲಭ್ಯವಿರಲಿದೆ. ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅನಿಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ ಐಸಿಎಂಆರ್ ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now