spot_img
spot_img

ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ : ಸಿಎಂ

spot_img
spot_img

Share post:

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ನಂತರ ಜನರು ಪ್ರತಿ ವರ್ಷ ರೂ.50,000 ಉಳಿತಾಯ ಮಾಡುತ್ತಿದ್ದಾರೆ. ಮಹಿಳೆಯರ ಶಕ್ತಿ ಯೋಜನೆಗೆ ವಾರ್ಷಿಕ ಒಟ್ಟು 57 ಸಾವಿರ ಕೋಟಿ ಕೊಡಲಾಗುತ್ತಿದೆ. ಆದರೆ, ನಮ್ಮ ವಿರೋಧಿಗಳು ಬೇರೆ ಬೇರೆ ರೀತಿಯಲ್ಲಿ ವಿರೋಧಿಸುತ್ತಿದ್ದಾರೆ.

ಮುಂದಿನ ವರ್ಷದಿಂದ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ತಿಂಗಳಿಗೆ 1,500 ರಿಂದ 2,000ಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದರು.

ಕನಕದಾಸರ ಜಯಂತೋತ್ಸವ ಸಮಿತಿ ಮೈಸೂರಿನಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿಗಳು ಮಾತನಾಡಿದರು.

ಮಹಿಳೆಯರ ಶಕ್ತಿ ಯೋಜನೆಗೆ ವಾರ್ಷಿಕ ಒಟ್ಟು 57 ಸಾವಿರ ಕೋಟಿ ಕೊಡಲಾಗುತ್ತಿದೆ. ಆದರೆ, ನಮ್ಮ ವಿರೋಧಿಗಳು ಬೇರೆ ಬೇರೆ ರೀತಿಯಲ್ಲಿ ವಿರೋಧಿಸುತ್ತಿದ್ದಾರೆ. ಅವರಿಗೆ ಬಡವರು ಮತ್ತು ಮಹಿಳೆಯರನ್ನು ವಿರೋಧ ಕಟ್ಟಿಕೊಳ್ಳಲು ಆಗದ ಹಿನ್ನೆಲೆಯಲ್ಲಿ ಶಕ್ತಿ ಯೋಜನೆಯನ್ನು ಕೈಬಿಡುವುದಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆಂದು ಕಿಡಿಕಾರಿದರು.

ಈ ಆಹಾರ ಸಂರಕ್ಷಣಾ ಕಾಯ್ದೆ ತಂದಿದ್ದು ಮನಮೋಹನ್ ಸಿಂಗ್. ಆದರೆ, ಅದನ್ನು ಅಂದಿನ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಓಟ್ ಸೆಕ್ಯುರಿಟಿ ಆಕ್ಟ್ ಎಂದು ವಿರೋಧಿಸಿದ್ದಾಗಿ ಹೇಳಿದರು. ಆದ್ದರಿಂದ ಪ್ರತಿಯೊಬ್ಬರು ಇತಿಹಾಸ ತಿಳಿಯಬೇಕು ಎಂದರು.

ನಮ್ಮ ರಾಜ್ಯದ ಬಜೆಟ್ ಗಾತ್ರ 3 ಲಕ್ಷ ಕೋಟಿ ಮೀರಿದೆ. ಇದರಲ್ಲಿ 57 ಸಾವಿರ ಕೋಟಿಯನ್ನು ಮಹಿಳಾ ಕಾರ್ಯಕ್ರಮಕ್ಕೆ ಮೀಸಲಿಡಲಾಗಿದೆ. ಇನ್ನು ಯಾರು ತೆರಿಗೆ ಪಾವತಿಸುತ್ತಿದ್ದಾರೋ ಅವರ ಹೆಸರಿನ ಬಿಪಿಎಲ್ ಕಾರ್ಡ್ ರದ್ದಾಗಲಿದೆ.

ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ನಂತರ ಜನರು ಪ್ರತಿ ವರ್ಷ ರೂ.50,000 ಉಳಿತಾಯ ಮಾಡುತ್ತಿದ್ದಾರೆ.

ಇದೇ ವೇಳೆ ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನ 1,500 ರೂ.ಗಳನ್ನು ಮುಂದಿನ ವರ್ಷದಿಂದ ರೂ.2 ಸಾವಿರಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ನಂತರ ಪಿಯುಸಿ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಆಯ್ದುಕೊಂಡಿದ್ದರಿಂದ ಸ್ವಲ್ಪ ಶ್ರಮ ವಹಿಸಬೇಕಾಯಿತು. ಪಿಯುಸಿ ಹಾಗೂ ಬಿ ಎಸ್ ಸಿ ಮತ್ತು ಲಾ ವ್ಯಾಸಂಗವನ್ನು ಸೆಕೆಂಡ್ ಕ್ಲಾಸಿನಲ್ಲಿ ಪಾಸ್ ಮಾಡಿದೆ. ಆದರೆ, ವಿದ್ಯಾರ್ಥಿ ಜೀವನದಲ್ಲಿ ಒಮ್ಮೆಯೂ ಫೇಲ್ ಆಗಲಿಲ್ಲ.

ಶಿಕ್ಷಕರು ಮಾಡುವ ಪಾಠವನ್ನು ಆಯಾಯ ದಿನದಂದೇ ಅಭ್ಯಾಸ ಮಾಡಬೇಕು. ಪ್ರತಿದಿನ ಐದಾರು ಗಂಟೆಗಳ ಕಾಲ ಅಭ್ಯಾಸ ಮಾಡಬೇಕು.

ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿ ಸ್ವತ್ತು ಅಲ್ಲ . ವಿವೇಕಾನಂದರು ಹೇಳಿದಂತೆ ಸುಪ್ತವಾದ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ.

ಹಿಂದುಳಿದ ವರ್ಗಗಳು 2ಎ ಕೆಟಗರಿಗೆ ಸೇರುತ್ತವೆ. ಆದರೆ, ಇದನ್ನು ಮೀರಿ ಮೆರಿಟ್ ನಲ್ಲಿ ಅಂಕ ಗಳಿಸಿ ಸೀಟ್ ಪಡೆಯಲು ಪ್ರಯತ್ನಿಸಬೇಕು, ಅದಕ್ಕಾಗಿ ಶ್ರಮವಹಿಸಬೇಕು. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಅವರು ಹೆಚ್ಚು ಅಂಕಗಳನ್ನು ತೆಗೆಯಲು ಸಹಕಾರಿಯಾಗುತ್ತದೆ.

ಜೀವನದಲ್ಲಿ ಮೇಲೆ ಬಂದ ಮೇಲೆ ನಡೆದು ಬಂದ ಹಾದಿಯನ್ನು ಮರೆಯಬಾರದು. ಸಮಾಜದಲ್ಲಿ ತುಳಿತಕ್ಕೊಳಗಾದವರ, ಅವಕಾಶ ವಂಚಿತರ ಸೇವೆ ಮಾಡಬೇಕು. ಹುಟ್ಟು ಆಕಸ್ಮಿಕ – ಸಾವು ನಿಶ್ಚಿತ, ಇವೆರಡರ ನಡುವಿನ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಅಲ್ಪ ಮಾನವರಾಗುವುದು ಬೇಡ. ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡೋಣ, ಇದು ಶಿಕ್ಷಣದ ಮೂಲ ಧ್ಯೇಯವು ಆಗಿದೆ. 1988ರಲ್ಲಿ 37 ವರ್ಷಗಳ ಹಿಂದೆ ನಾನು ಸಾರಿಗೆ ಮಂತ್ರಿಯಾಗಿದ್ದಾಗ ಕನಕದಾಸ ಜಯಂತಿಯ 500ನೇ ವರ್ಷಾಚರಣೆಯನ್ನು ಆಚರಿಸಲಾಯಿತು. ಕನಕದಾಸರು ಒಬ್ಬ ಕವಿ, ಸಂತ, ದಾರ್ಶನಿಕ.

ಕನಕದಾಸರು ಹಿಂದುಳಿದ ಜಾತಿಗೆ ಸೇರಿದ್ದರಿಂದ ಅನೇಕ ಅಪಮಾನಗಳನ್ನು ಎದುರಿಸಬೇಕಾಯಿತು. ಅದನ್ನೆಲ್ಲಾ ಮೀರಿ ಅವರು ಸಂತರಾದ ಬಗೆ ಪ್ರತಿಯೊಬ್ಬರಿಗೂ ಆದರ್ಶ. ಕನಕದಾಸರ ಪ್ರತಿಮೆಯನ್ನು ಮೈಸೂರು ನಗರದಲ್ಲಿ ಸ್ಥಾಪಿಸಲಾಗುವುದು. ಈ ಮೂಲಕ ಅವರ ಜೀವನಾದರ್ಶ ಇನ್ನೂ ಹೆಚ್ಚು ಜನರನ್ನು ತಲುಪುವಂತಾಗಲಿ ಎಂದು ತಿಳಿಸಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...