WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
Bangalore News:
ಅನಾರೋಗ್ಯ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟ ಸರಿಗಮ VIJAY ಕೊನೆಯುಸಿರೆಳೆದಿದ್ದಾರೆ.ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ VIJAY ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ ಸೇರಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಟ ತಮ್ಮ 76ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಸರಿಗಮ VIJAY ಅವರ ನಿಧನವನ್ನು ಅವರ ಕುಟುಂಬಸ್ಥರು ದೃಢಪಡಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
How did Sarigam Vijay get his name? ‘ಸಂಸಾರದಲ್ಲಿ ಸರಿಗಮ’ ಎಂಬ ನಾಟಕವನ್ನು ಇವರು ನಿರ್ದೇಶಿಸಿ, ನಟಿಸಿದ್ದಾರೆ. ಈ ನಾಟಕ ದೇಶಾದ್ಯಂತ 1,300ಕ್ಕೂ ಹೆಚ್ಚು ಬಾರಿ ಪ್ರದರ್ಶನಗೊಂಡಿದೆ. ಆರ್ VIJAY ಕುಮಾರ್ ಇವರ ಮೂಲ ಹೆಸರು. ಆದರೆ ಈ ನಾಟಕದಿಂದ ಹೆಚ್ಚಿನ ಜನಪ್ರಿಯತೆ ಸಂಪಾದಿಸಿದ ಬಳಿಕ ಸರಿಗಮ VIJAY ಎಂದು ಗುರುತಿಸಿಕೊಂಡರು.
ಮಹಾಲಕ್ಷ್ಮೀ ಲೇಔಟ್ನ ನಿವಾಸದಲ್ಲಿ ಇವರು ವಾಸಿಸುತ್ತಿದ್ದರು. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಮಧ್ಯಾಹ್ನದ ಹೊತ್ತಿಗೆ ಅಂತ್ಯಕ್ರಿಯೆ ನಡೆಯಲಿದೆ.ಬೆಳುವಲದ ಮಡಿ ಎಂಬುದು ಇವರ ಮೊದಲ ಚಿತ್ರ. ಹಾಸ್ಯ ನಟನೆ, ಪೋಷಕ ನಟನಾಗಿ ತಮ್ಮದೇ ಆದ ಜನಪ್ರಿಯತೆ ಸಂಪಾದಿಸಿದ್ದರು. ಸದ್ಯ ಇಹಲೋಕ ತ್ಯಜಿಸಿದ್ದು, ಕುಟುಂಬ ಕಣ್ಣೀರಿನಲ್ಲಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ವ್ಯಕ್ತವಾಗುತ್ತಿದೆ.
ರಂಗಭೂಮಿ ಮತ್ತು ಕಿರುತೆರೆ, ಹಿರಿತೆರೆಯಲ್ಲಿ ಸರಿಗಮVIJAY ಹೆಸರು ಮಾಡಿದ್ದಾರೆ. 1975ರ ಸಂದರ್ಭ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ VIJAY ಈವರೆಗೆ 250ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಲ್ಲಿ ಸಹ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದರು.
Vijayendra Condolences: ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದರು ಎಂದಿದ್ದಾರೆ.
ಸರಿಗಮ ವಿಜಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ವಿಜಿ ಅವರದ್ದು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಗಳಿಸಿತ್ತು.
ಇದನ್ನು ಓದಿರಿ : DELHI ASSEMBLY POLLS 2025 : ದೆಹಲಿ ವಿಧಾನಸಭಾ ಚುನಾವಣೆ