spot_img
spot_img

VIRAT KOHLI FIRST REACTION:ಆ ಒಂದು ಮಾತಿಗೆ ಫ್ಯಾನ್ಸ್ ಫಿದಾ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Virat Kohli to Rajat Patidar News:

18ನೇ ಆವೃತ್ತಿಯಲ್ಲಿ RCB ತಂಡವನ್ನು ನಾಯಕನಾಗಿ (RCB Captain) ರಜತ್​ ಪಾಟಿದಾರ್​ ಮುನ್ನಡೆಸಲಿದ್ದಾರೆ. 2021 ರಿಂದಲೂ ಆರ್​ಸಿಬಿ ತಂಡದ ಭಾಗವಾಗಿರುವ ರಜತ್​ ಪಾಟಿದಾರ್​ ಅವರನ್ನು ಈ ಬಾರಿ ಫ್ರಾಂಚೈಸಿ ರಿಟೈನ್​ ಮಾಡಿಕೊಂಡು ತಂಡದಲ್ಲಿ ಉಳಿಸಿಕೊಂಡಿದೆ.RCBಗೆ ಹೊಸ ನಾಯಕನಾಗಿ ನೇಮಕಗೊಂಡಿರುವ ಯುವ ಆಟಗಾರ ರಜತ್​ ಪಾಟಿದಾರ್​ ಬಗ್ಗೆ VIRAT KOHLI ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಇಂಡಿಯನ್​ ಪ್ರೀಮಿಯರ್​ ಲೀಗ್​ 2025ರ ಆರಂಭಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇರುವಾಗಲೇ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (RCB) ಇಂದು ಹೊಸ ಜೆರ್ಸಿ, ವೆಬ್​ಸೈಟ್ ​ನೊಂದಿಗೆ ನೂತನ ನಾಯಕನನ್ನು ಘೋಷಣೆ ಮಾಡಿದೆ.ಇದೀಗ ಫ್ರಾಂಚೇಸಿ ಪಾಟಿದಾರ್​ಗೆ ನಾಯಕತ್ವದ ಹೊಸ ಜವಾಬ್ದಾರಿಯನ್ನು ನೀಡಿದ್ದು ಹೇಗೆ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ನೋಡಲು ಫ್ಯಾನ್ಸ್​​ ಕಾತುರರಾಗಿದ್ದಾರೆ. ಏತನ್ಮಧ್ಯೆ, ಆರ್​ಸಿಬಿ ಹೊಸ ನಾಯಕನ ಘೋಷಣೆ ಮಾಡುತ್ತಿದ್ದಂತೆ ಮಾಜಿ ನಾಯಕ VIRAT KOHLI ಫಸ್ಟ್​ ರಿಯಾಕ್ಷನ್​ ನೀಡಿದ್ದಾರೆ.

ಪಾಟಿದಾರ್​ ಕೂಡ ತಂಡದ ಭರವಸೆಯ ಆಟಗಾರನಾಗಿದ್ದು ಹಲವಾರು ಸಂದರ್ಭಗಳಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್​ ಮೂಲಕ ತಂಡವನ್ನು ಗೆಲ್ಲಿಸಿರುವ ಉದಾರಣೆಗಳಿವೆ. ಬ್ಯಾಟಿಂಗ್​ ಮೂಲಕ ಘರ್ಜಿಸುವ ಪಾಟಿದಾರ್​ ಕ್ರೀಸ್​ನಲ್ಲಿರುವ ವರೆಗೂ ಎದುರಾಳಿ ತಂಡಗಳನ್ನು ಕಾಡುತ್ತಾರೆ.

Kohli’s first reaction:ಸಮಾನ್ಯವಾಗಿ VIRAT KOHLI ಯುವ ಆಟಗಾರರನ್ನು ಪ್ರೋತ್ಸಾಹಿಸುವಲ್ಲಿ ಸದಾ ಮುಂದಿರುತ್ತಾರೆ. ಇದೀಗ ಪಾಟಿದಾರ್​ಗೂ ಬೆಂಬಲ ನೀಡಿ ಮತ್ತು ತಮ್ಮ ಅಭಿಮಾನಿಗಳಿಗೂ ಬೆಂಬಲ ನೀಡುವಂತೆ ಕೋರಿದ್ದು ಇದಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ.

ರಜತ್​ ಪಾಟಿದಾರ್ ನಾಯಕನಾಗಿ ಆಯ್ಕೆಗೊಳ್ಳುತ್ತಿದ್ದಂತೆ ಮಾಜಿ ನಾಯಕ ವಿರಾಟ್​ ಕೊಹ್ಲಿ ಶುಭಾಶಯ ಕೋರಿದ್ದಾರೆ. ಆರ್​ಸಿಬಿ ತಂಡವನ್ನು ಪ್ರತಿನಿಧಿಸುತ್ತಿರುವ ರಜತ್​ ನಾಯಕ ಸ್ಥಾನಕ್ಕೆ ಅರ್ಹರಾಗಿದ್ದಾರೆ. ನಾನು ಮತ್ತು ಆರ್​ಸಿಬಿ ತಂಡ ಸದಾ ರಜತ್​ ಅವರಿಗೆ ಬೆಂಬಲವನ್ನು ನೀಡುತ್ತೇವೆ. ಆರ್​ಸಿಬಿ ನಿಮಗೆ ನಾಯಕನ ದೊಡ್ಡ ಜವಾಬ್ದಾರಿಯನ್ನು ನೀಡಿದೆ. RCB ಅಭಿಮಾನಿಗಳು ಕೂಡ ನೂತನ ನಾಯಕನಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. VIRAT KOHLIಯ ಈ ಮಾತು ಆರ್​ಸಿಬಿ ಅಭಿಮಾನಿಗಳ ಮನ ಗೆದ್ದಿದೆ.

Rajat’s IPL record:ಈ ವರೆಗೂ ಆರ್​ಸಿಬಿ ತಂಡದ ಪರ ರಜತ್​ ಪಾಟಿದಾರ್​ ಒಟ್ಟು 27 ಪಂದ್ಯಗಳನ್ನು ಆಡಿದ್ದಾರೆ. 24 ಇನ್ನಿಂಗ್ಸ್​ಗಳಲ್ಲಿ 34.74ರ ಸರಾಸರಿಯಲ್ಲಿ ಒಟ್ಟು 779 ರನ್​ ಕಲೆ ಹಾಕಿದ್ದಾರೆ. ಅದರಲ್ಲಿ 1ಶತಕ, 7 ಅರ್ಧಶತಕ ಸೇರಿವೆ. 112ರನ್​ ಐಪಿಎಲ್​ನಲ್ಲಿ ಇವರ ಬೆಸ್ಟ್​ ಇನ್ನಿಂಗ್ಸ್​ ಆಗಿದೆ.

RCB Squad for IPL 2025:VIRAT KOHLI, ಫಿಲ್ ಸಾಲ್ಟ್​, ಟಿಮ್ ಡೇವಿಡ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ರಜತ್ ಪಾಟಿದಾರ್ (ನಾಯಕ), ಕೃನಾಲ್ ಪಾಂಡ್ಯ, ಮನೋಜ್ ಭಾಂಡಗೆ, ಮೋಹಿತ್ ರಥಿ, ರೊಮಾರಿಯೊ ಶೆಫರ್ಡ್​, ಜೇಕಬ್​ ಬೆಥೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ವಪ್ನಿಲ್ ಸಿಂಗ್, ಜಿತೇಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಭುವನೇಶ್ವರ್ ಕುಮಾರ್, ಲುಂಗಿ ಎಂಗಿಡಿ, ರಸಿಕ್ ದಾರ್ ಸಲಾಂ, ಸುಯಶ್ ಶರ್ಮಾ, ಯಶ್ ದಯಾಳ್, ನುವಾನ್ ತುಷಾರ, ಅಭಿನಂದನ್ ಸಿಂಗ್.

 

ಇದನ್ನು ಓದಿರಿ :As Prashant Kishor meets Vijay buzz of a realignment in politics

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...