spot_img
spot_img

ಸಂಪುಟ ವಿಸ್ತರಣೆ ಸಂದರ್ಭ ಬಂದಾಗ ಆಗುತ್ತೆ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

spot_img
spot_img

Share post:

ನವದೆಹಲಿ/ಬೆಂಗಳೂರು: ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ.

“ಸಂಪುಟ ವಿಸ್ತರಣೆ ಆ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, “ಒಂದು ಸಚಿವ ಸ್ಥಾನ ಖಾಲಿ ಇದ್ದು, ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ. ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ”ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಮಾಧ್ಯಮ ಮುಂದೆ ಚರ್ಚೆ ನಡೆಸುವುದು ಸೂಕ್ತವಲ್ಲ” ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಮಾತನಾಡಿ, “ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮ ಗಾಂಧಿಯವರು ಅಧಿಕಾರ ವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ” ಎಂದರು.

“ಡಿಸೆಂಬರ್ 28 ರಂದೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ. ಆದ ಕಾರಣ ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಬಳಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿ ತೆಗೆದುಕೊಂಡ ಸಲಹೆ, ಸೂಚನೆಗಳನ್ನು ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಚರ್ಚೆ ಮಾಡಿದೆ. ಸುಮಾರು 300ಕ್ಕೂ ಹೆಚ್ಚು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ನಾವು ಈ ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದೇವೆ. ಈ ಬಗ್ಗೆ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ತಿಳಿಸುವುದಾಗಿ ಅವರು ಹೇಳಿದ್ದಾರೆ. ನಾನು ಮತ್ತು ಮುಖ್ಯಮಂತ್ರಿ ಇಬ್ಬರು ಒಟ್ಟಿಗೆ ಈ ಬಗ್ಗೆ ಚರ್ಚೆ ಮಾಡಿದ್ದೇವೆ” ಎಂದರು.

ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರ ಎಐಸಿಸಿಗೆ ಬಂದಿದೆ ಎಂಬ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ.

ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿ ಮಾಡಿ ಮೂರು ನಾಲ್ಕು ದಿನಗಳಾಗಿವೆ. ಪಕ್ಷದ ಭಾಗವಹಿಸುವಿಕೆ ಖಂಡಿತ ಇದ್ದೇ ಇರುತ್ತದೆ” ಎಂದು ತಿಳಿಸಿದರು.

“ರಾಂಚಿಯಲ್ಲಿ ನಡೆದ ಹೇಮಂತ್ ಸೊರೇನ್ ಅವರ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಕ್ಷದ ಪರವಾಗಿ ರಾಹುಲ್ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ನಾನು ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು. ಇಂಡಿಯಾ ಒಕ್ಕೂಟದ ನಾಯಕರು ಭಾಗವಸಿ ಹೇಮಂತ್ ಅವರಿಗೆ ಶುಭ ಕೋರಿದೆವು” ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿ, “ರಾಜ್ಯದ ವಿಚಾರಗಳು ಹಾಗೂ ಮುಖ್ಯವಾಗಿ ನೀರಾವರಿ ವಿಚಾರವಾಗಿ ಮನವಿಯನ್ನು ಸಲ್ಲಿಸಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಾಗುತ್ತಿದೆ.

ಗುರುವಾರದಂದು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಕಳಸಾ – ಬಂಡೂರಿ ವಿಚಾರವಾಗಿ ಪರಿಸರ ಇಲಾಖೆಯಿಂದ ಬಾಕಿ ಇರುವ ಅನುಮತಿ ಹಾಗೂ ಅಡೆತಡೆಗಳನ್ನು ನಿವಾರಿಸಬೇಕು ಎಂದು ಮನವಿ ಸಲ್ಲಿಸಿದ್ದೆವು.

ಇದಕ್ಕೆ ಇಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ವನ್ಯಜೀವಿ ಮಂಡಳಿಗೆ ಪ್ರಧಾನಿ ಅವರೇ ಅಧ್ಯಕ್ಷರಾಗಿರುವ ಕಾರಣಕ್ಕೆ ಅವರಿಗೂ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದರು.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...