spot_img
spot_img

WALNUTS HEALTH BENEFITS : ಪ್ರತಿದಿನ ವಾಲ್ನಟ್ಸ್ ಸೇವಿಸಿದರೆ ಹೃದಯದ ಆರೋಗ್ಯಕ್ಕೆ ಉತ್ತಮ

spot_img
spot_img

Share post:

Health Benefits of Walnuts News:

ಹೃದ್ರೋಗದ ಅಪಾಯ ಕಡಿಮೆಯಾಗಬೇಕಾದರೆ, ಪ್ರತಿದಿನ ನಿಯಮಿತವಾಗಿ ವಾಲ್‌ನಟ್ಸ್ ಸೇವಿಸುವುದು ಉತ್ತಮ ಎಂದು ತಜ್ಞರು ತಿಳಿಸುತ್ತಾರೆ.ಹಠಾತ್ ಹೃದ್ರೋಗಕ್ಕೆ ತುತ್ತಾಗಿ ಹಲವು ಜನರು ಪ್ರಾಣ ಕಳೆದುಕೊಂಡಿರುವ ಘಟನೆಗಳು ವರದಿಯಾಗಿವೆ. ಹೆಚ್ಚಿನ ಜನರು ಉತ್ತಮ ಆರೋಗ್ಯಕ್ಕಾಗಿ ತಮ್ಮ ದೈನಂದಿನ ಆಹಾರದಲ್ಲಿ ವಿವಿಧ ರೀತಿಯ ಹಣ್ಣುಗಳು ಹಾಗೂ ಒಣ ಹಣ್ಣುಗಳು, ಬೀಜಗಳನ್ನು ಸೇರಿಸಿಕೊಳ್ಳುತ್ತಾರೆ.

ಅದರಲ್ಲಿ ವಾಲ್ ನಟ್ಸ್ ಇರುವಂತೆ ನೋಡಿಕೊಳ್ಳುವುದು ಬಹಳ ಮುಖ್ಯ ಎನ್ನುತ್ತಾರೆ ತಜ್ಞರು.ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಅನೇಕ ಜನರು ಚಿಕ್ಕ ವಯಸ್ಸಿನಲ್ಲಿ ಅನೇಕ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಬೇಧವಿಲ್ಲದೆ ಹೃದಯ ಸಂಬಂಧಿ ಕಾಯಿಲೆಗಳನ್ನು ಎದುರಿಸುತ್ತಿದ್ದಾರೆ.ವಾಲ್‌ನಟ್ಸ್‌ನಲ್ಲಿ ಯಾವ ಪೋಷಕಾಂಶಗಳಿವೆ? ಅವುಗಳನ್ನು ತಿನ್ನುವುದರಿಂದ ಹೃದಯಕ್ಕೆ ಹೇಗೆ ಲಾಭವಾಗುತ್ತದೆ? ಸಂಶೋಧನೆಯ ಸಂಪೂರ್ಣ ವಿವರಗಳನ್ನು ತಿಳಿಯೋಣ.

ಇವುಗಳನ್ನು ಪ್ರತಿನಿತ್ಯ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ. ಎಲ್ಲಕ್ಕಿಂತ ಹೆಚ್ಚಾಗಿ ವಾಲ್​​ನಟ್ಸ್ ತಿನ್ನುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇತ್ತೀಚಿನ ಸಂಶೋಧನೆಯೊಂದು ವಾಲ್‌ನಟ್ಸ್ ಸೇವನೆಯು ಪ್ರೌಢಾವಸ್ಥೆಯಲ್ಲಿ ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ ಎಂದು ತಿಳಿದಿದೆ.

Research says: ನಿರ್ದಿಷ್ಟವಾಗಿ ವಾಲ್‌ನಟ್ಸ್​ನಲ್ಲಿ ಒಮೆಗಾ- 3 ಆಲ್ಫಾ-ಲಿನೋಲೆನಿಕ್ ಕೊಬ್ಬಿನಾಮ್ಲ ಸಮೃದ್ಧವಾಗಿದೆ. ಇದಲ್ಲದೆ, ಅವುಗಳಲ್ಲಿ ಫೈಬರ್, ಪ್ರೊಟೀನ್, ಮೆಗ್ನೀಸಿಯಮ್, ರಂಜಕ ಮತ್ತು ಇತರ ಪ್ರಮುಖ ಪೋಷಕಾಂಶಗಳಿವೆ ಎಂಬುದನ್ನು ಸಂಶೋಧನೆಯಿಂದ ಸ್ಪಷ್ಟವಾಗಿದೆ.

ಇತ್ತೀಚೆಗೆ ‘ಯೂನಿವರ್ಸಿಟಿ ಆಫ್ ಮಿನ್ನೇಸೋಟ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್’ನ ಸಂಶೋಧಕರು ಈ ಸಂಶೋಧನೆ ನಡೆಸಿದ್ದಾರೆ. ಇದನ್ನು ‘ನ್ಯೂಟ್ರಿಷನ್, ಮೆಟಾಬಾಲಿಸಮ್ & ಕಾರ್ಡಿಯೋವಾಸ್ಕುಲರ್ ಡಿಸೀಸ್’ ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ.

Solution to various problems: ಆದ್ದರಿಂದ ಇವುಗಳನ್ನು ಪ್ರತಿನಿತ್ಯ ಸೇವಿಸುವುದರಿಂದ ಇವುಗಳಲ್ಲಿರುವ ಎಲ್ಲಾ ಪೋಷಕಾಂಶಗಳು ಹದಿಹರೆಯದಲ್ಲಿ ಮತ್ತು ಪ್ರೌಢಾವಸ್ಥೆಯಲ್ಲಿ ಅನೇಕ ಹೃದಯ ಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತದೆ ಎಂದು ಸಂಶೋಧಕರು ತಿಳಿಸುತ್ತಾರೆ.

ಇವುಗಳ ಸೇವನೆಯಿಂದ ಕ್ಯಾನ್ಸರ್, ಬೊಜ್ಜು, ಮಧುಮೇಹ ಹಾಗೂ ಮೆದುಳು ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ ಎಂದು ಈ ಸಂಶೋಧನೆಯಲ್ಲಿ ತಿಳಿದಿದೆ.ಅಲ್ಲದೆ, ವಾಲ್​ನಟ್ಸ್ ಪಾಲಿಫಿನಾಲ್​​ಗಳನ್ನು ಒಳಗೊಂಡಂತೆ ವಿವಿಧ ಉತ್ಕರ್ಷಣ ನಿರೋಧಕಗಳನ್ನು ಸಹ ಒದಗಿಸುತ್ತದೆ.

Walnuts are good food for: ಇತರ ಒಣಗಿದ ಹಣ್ಣುಗಳನ್ನು ತಿನ್ನುವವರಿಗಿಂತ, ವಾಲ್‌ನಟ್ಸ್ ಸೇವಿಸುವವರಲ್ಲಿ ಹೃದ್ರೋಗದ ಅಪಾಯ ಕಡಿಮೆ ಇರುತ್ತದೆ ಎಂದು ಅವರು ವಿವರಿಸುತ್ತಾರೆ. ಅಲ್ಲದೆ, ಆರೋಗ್ಯಕರ ಪೌಷ್ಟಿಕಾಂಶ ಮತ್ತು ಉತ್ತಮ ಜೀವನಶೈಲಿ ಅಭ್ಯಾಸಗಳನ್ನು ರೂಢಿಸಿಕೊಳ್ಳಲು ಸಹಾಯ ಮಾಡಲು ವಾಲ್‌ನಟ್ಸ್ ಉತ್ತಮ ಆಹಾರವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸಂಶೋಧಕರು ತಿಳಿಸುತ್ತಾರೆ.

ಈ ಸಂಶೋಧನೆಯಲ್ಲಿ ಭಾಗವಹಿಸಿದವರಲ್ಲಿ ಒಬ್ಬರು, ಮಿನ್ನೇಸೋಟ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನಲ್ಲಿ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಸಮುದಾಯ ಆರೋಗ್ಯದ ಪ್ರಾಧ್ಯಾಪಕ ಲಿನ್ ಎಂ. ಸ್ಟೀಫನ್ ಅವರು ಇದನ್ನೇ ಸ್ಪಷ್ಟಪಡಿಸಿದ್ದಾರೆ.

 

 

ಇದನ್ನು ಓದಿರಿ : SLEEPING WITH SOCKS IN WINTER : ಹೀಗೆ ಮಾಡಿದರೆ ಏನಾಗುತ್ತೆ ಗೊತ್ತಾ?

 

 

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...