WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
ಶ್ರೀನಗರ, ಜಮ್ಮು ಕಾಶ್ಮೀರ: ಖಚಿತ ಗುಪ್ತಚರ ಮೂಲಗಳ ಮಾಹಿತಿ ಅನುಸಾರ ಈ ದಾಳಿ ನಡೆದಿದೆ. ಶ್ರೀನಗರದ ದಾಚಿಗಂ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ಮೇಲೆ ಭಯೋತ್ಪಾದಕರ ದಾಳಿಗೆ ಭದ್ರತಾ ಪಡೆ ಕೂಡಾ ಪ್ರತಿದಾಳಿ ನಡೆಸಿದೆ. ಪರಿಣಾಮ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದ್ದು, ಈ ಎನ್ಕೌಂಟರ್ ಸಾಗಿದೆ ಎಂದು ತಿಳಿದು ಬಂದಿದೆ.
ಈ ದಾಚಿಗಂ ರಾಷ್ಟ್ರೀಯ ಉದ್ಯಾನವನವಾಗಿದ್ದು, ನಗರದ ಹೊರವಲಯದಲ್ಲಿದೆ. ಸುಮಾರು 141 ಚದರ ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ.
ಖಚಿತ ಗುಪ್ತಚರ ಮೂಲಗಳ ಮಾಹಿತಿ ಅನುಸಾರ ಈ ದಾಳಿ ನಡೆದಿದೆ. ದಚಿಗಮ್ ಅರಣ್ಯದ ಮೇಲ್ಭಾಗದ ಕಾರ್ಡನ್ ನಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.