MYSURU ಚಲೋ ಪಾದಯಾತ್ರೆಗೂ ಮುನ್ನ ನಾಡ ದೇವಿಗೆ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ!
MYSURU ಚಲೋ ಪಾದಯಾತ್ರೆ ಪ್ರಾರಂಭ!
ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು ತಮ್ಮ X ಪೋಸ್ಟ್ ನಲ್ಲಿ ಎಂದು ನೀವೇ ಓದಿ!
ಮೈಸೂರು ಚಲೋ ಪಾದಯಾತ್ರೆಯ ಆರಂಭಕ್ಕೂ ಮುನ್ನ ಇಂದು ರಾಜ್ಯಾಧ್ಯಕ್ಷರಾದ ಶ್ರೀ BY Vijayendraನವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಾಶೀರ್ವಾದ ಪಡೆದರು.
ಜೊತೆಗೆ ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಎಂ ರಾಜೇಂದ್ರ, ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಆರ್.ರಘು ಕೌಟಿಲ್ಯ, ಜಿಲ್ಲಾಧ್ಯಕ್ಷರಾದ ಶ್ರೀ ಎಲ್. ನಾಗೇಂದ್ರ, ಶ್ರೀ ಎಲ್.ಆರ್.ಮಹದೇವಸ್ವಾಮಿ, ಸೇರಿದಂತೆ ಪಕ್ಷದ ಮುಖಂಡರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಮತ್ತು ನಾಡ ದೇವಿ ಅವರಿಗೆ ಆಶೀರ್ವಾದ ಮಾಡುವಂತೆ ಕೇಳಿದರು!
MUDA Scam ವಿರುದ್ಧ ದೊಡ್ಡ ಧ್ವನಿ!
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವಾಗಿದೆ. ಏಕೆಂದರೆ ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ನೀಡಬೇಕೆಂದು ಶನಿವಾರ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಬೆಂಗಳೂರು-ಮೈಸೂರು ಪಾದಯಾತ್ರೆ ಮಾಡಲು ತಯಾರಾಗಿವೆ.
ನಾಡ ದೇವಿಗೆ ಕೈ ಮುಗಿದ ಬಿಜೆಪಿ ನಾಯಕರು!
ಪಾದಯಾತ್ರೆ ಯಶಸ್ವಿಗಾಗಿ ಚಾಮುಂಡೇಶ್ವರಿತಾಯಿ ಬಳಿ ಪ್ರಾರ್ಥಿಸಿದ್ದೇನೆ. ಪಾದಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಹಿಂದ ಅಂತ ಹೆಸರು ಹೇಳಿಕೊಂಡು ಅಧಿಕಾರ ಹಿಡಿದಿದೆ. ಆದರೆ ಅಹಿಂದ ವರ್ಗಕ್ಕೆ ಸಿದ್ದರಾಮಯ್ಯ ಸರ್ಕಾರ ದ್ರೋಹ ಬಗೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿ ಹೋಗಿದೆ. ತುಳಿತಕ್ಕೊಳಗಾದವರಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಸೈಟ್ ಹಗರಣ SCP, TSP ಹಣ ದುರ್ಬಳಕೆ ಖಂಡಿಸಿ ಮೈಸೂರು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ಮೈಸೂರು ಚಲೋ ಪಾದಯಾತ್ರೆ ಆಗಸ್ಟ್ 10 ರಂದು ಅಂತ್ಯ!
ಮೈಸೂರು ಚಲೋ ಪಾದಯಾತ್ರೆ ಕೆಂಗೇರಿಯ ಕೆಂಪಮ್ಮ ದೇಗುಲದಿಂದ ಆರಂಭವಾಗುತ್ತದೆ. ಆಗಸ್ಟ್ 10ರಂದು ಮುಕ್ತಾಯವಾಗಲಿದೆ. ಪ್ರತಿದಿನ 20 ಕಿಲೋ ಮೀಟರ್ ಪಾದಯಾತ್ರೆ ಸಾಗಲಿದೆ. ಪಾದಯಾತ್ರೆಯಲ್ಲಿ 224 ಕ್ಷೇತ್ರಗಳ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಇಂದು 8 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಒಂದೊಂದು ದಿನ ಒಂದೊಂದು ಮೋರ್ಚಾದವರು ಭಾಗಿಯಾಗುತ್ತಾರೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಒಂದು ತಂಡ ಭಾಗಿಯಾದರೆ, ಮಧ್ಯಾಹ್ನದಿಂದ ಸಂಜೆಯವರೆಗೆ ಮತ್ತೊಂದು ತಂಡ ಭಾಗಿಯಾಗುತ್ತದೆ. ಪಾದಯಾತ್ರೆ ಯಶಸ್ವಿಗೆ ಎರಡು ಪಕ್ಷಗಳಿಂದ ಸಮನ್ವಯ ತಂಡ ರಚಿಸಲಾಗಿದೆ.
ಮೈಸೂರು ಚಲೋ ಪಾದಯಾತ್ರೆಯ ಆರಂಭಕ್ಕೂ ಮುನ್ನ ಇಂದು ರಾಜ್ಯಾಧ್ಯಕ್ಷರಾದ ಶ್ರೀ @BYVijayendra ನವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಾಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಎಂ ರಾಜೇಂದ್ರ, ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಆರ್.ರಘು ಕೌಟಿಲ್ಯ,… pic.twitter.com/x6OrmEy9ti
— BJP Karnataka (@BJP4Karnataka) August 3, 2024
ಇನ್ನಷ್ಟು ಓದಿರಿ:
New Parliament Building: ಸೋರುತಿಹುದು 971 Crore ಸಂಸದ್ ಮಾಳಿಗೆ ಮಹಾ ಜ್ಞಾನಿಯಿಂದ?
C M ಗೆ ಶೋಕಾಸ್ ನೋಟಿಸ್: ಇದಕ್ಕೆಲ್ಲ ಅಂಜುವ ಜಾಯಮಾನ ನನ್ನದಲ್ಲ -C M ಸಿದ್ದರಾಮಯ್ಯ