Belgaum News:
ಬೆನ್ನಲ್ಲೇ ಪಾಲಿಕೆ ಆಯುಕ್ತೆ ಶುಭಾ ಅವರು ಕಾನೂನು ಬಾಹಿರವಾಗಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ರಾ ಎಂಬ ಪ್ರಶ್ನೆ ಎದ್ದಿದೆ. ಜೊತೆಗೆ ನೊಂದ ಸಿಬ್ಬಂದಿ ಸಚಿವ ಸತೀಶ್ ಜಾರಕಿಹೊಳಿಯನ್ನು ಭೇಟಿಯಾಗಿ ಶುಭಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ವರ್ಗಾವಣೆ ಮೂಲಕ ಆಯುಕ್ತೆ ಶುಭಾ ನಮಗೆ ಮಾನಸಿಕ ಹಿಂಸೆ ಕೊಡ್ತಿದ್ದಾರೆಂದು ಸಿಬ್ಬಂದಿ ಆರೋಪಿಸಿದ್ದಾರೆ.
ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ಮಧ್ಯೆ ಕೋಲ್ಡ್ ವಾರ್ ಶುರುವಾಗಿದ್ದು, ಕೇವಲ ನಾಲ್ಕು ದಿನಗಳ ಅಂತರದಲ್ಲಿ 40 ಅಧಿಕಾರಿಗಳು, ಸಿಬ್ಬಂದಿಯ ವರ್ಗಾವಣೆ ಮಾಡಲಾಗಿದೆ.6 ಲಕ್ಷ ಜನಸಂಖ್ಯೆ ಹೊಂದಿರುವ Belgaumಗೆ ಇದೆ ಮೊದಲ ಬಾರಿಗೆ ಕೆಎಂಎಸ್ ಅಧಿಕಾರಿ ಆಯುಕ್ತೆ ಆಗಿ ಬಂದಿದ್ದಾರೆ. ಐಎಎಸ್ ಅಧಿಕಾರಿಯನ್ನು Belgaumಮಹಾನಗರ ಪಾಲಿಕೆಗೆ ನಿಯೋಜಿಸುವಂತೆ ಸಚಿವರಿಗೆ ಮನವಿ ಮಾಡಲಾಗಿದೆ.
ಇನ್ನು ಆಡಳಿತಾತ್ಮಕ ದೃಷ್ಟಿಯಿಂದ ಸಿಬ್ಬಂದಿಯನ್ನು ವರ್ಗಾವಣೆ ಮಾಡಿರುವುದಾಗಿ ಶುಭಾ ಸಮರ್ಥನೆ ಮಾಡಿಕೊಂಡಿದ್ದಾರೆ. ಇದರ ಮಧ್ಯೆ ಶುಭಾರನ್ನು ವರ್ಗಾವಣೆ ಮಾಡುವಂತೆ ಬೆಳಗಾವಿ ಮಹಾನಗರ ಪಾಲಿಕೆ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ. ಕೆಎಂಎಸ್ ಅಧಿಕಾರಿಗೆ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹುದ್ದೆ ನೀಡಲಾಗಿದೆ.
ಇದನ್ನು ಓದಿರಿ :Rakshita’s brother is the actress who entered married life: ರಾಣಾ ಮದುವೆಗೆ ಯಾರೆಲ್ಲಾ ಬಂದಿದ್ರು?