spot_img
spot_img

ಬೆಳಗಾವಿ : ಹುಡುಗಿಯರೇ ಹುಷಾರ್‌! ಸ್ವಲ್ಪ ಯಾಮಾರಿದರೂ ನಿಮ್ಮನ್ನ ಬೆತ್ತಲಾಗಿಸಿ ಹಣ ಕೀಳುತ್ತಾರೆ ಈ ಖದೀಮರು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಳಗಾವಿ :  ಹುಡುಗಿಯರೇ ಹುಷಾರ್ ನೀವೂ ಸ್ವಲ್ಪ ಯಾಮಾರಿದರೂ ನಿಮ್ಮನ್ನ ಬೆತ್ತಲಾಗಿಸಿ ಹಣಕ್ಕೆ ಬೇಡಿಕೆ ಇಡುವ ಖತರ್ನಾಕ್‌ ಗ್ಯಾಂಗ್‌ವೊಂದು (Fraud Case) ಆ್ಯಕ್ವಿವ್‌ ಆಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್, ಐಬಿ ಎಂದು ಹೆಸರು ಹೇಳಿಕೊಂಡು ಕರೆ ಮಾಡುವ ಖದೀಮರು, ನೀವು ಕ್ರೈಂವೊಂದರಲ್ಲಿ ಭಾಗಿಯಾಗಿದೀರಿ ಎಂದು ಹೆದರಿಸುತ್ತಾರೆ.

ಇದನ್ನೂ ಓದಿ : ಗ್ರಾಮೀಣ ಭಾಗದಲ್ಲಿ ಅರಳಿದ ಪ್ರತಿಭೆ : ಸಮಯಾ ಕಿರುಚಿತ್ರದ ಪೋಸ್ಟರ್‌ ಬಿಡುಗಡೆ..!

ವಿಡಿಯೊ ಕಾಲ್ ಮೂಲಕ ಮಾಹಿತಿ ಕೇಳಿ, ನಿಮ್ಮ ಇಡೀ ಬಾಡಿ ತಪಾಸಣೆ ಮಾಡಬೇಕು ಎಂದು ಬೆತ್ತಲೆಗೊಳಿಸುತ್ತಾರೆ. ಇದನ್ನೇ ರೆಕಾರ್ಡ್ ಮಾಡಿಕೊಂಡು ಬಳಿಕ ಹಣಕ್ಕಾಗಿ ಡಿಮ್ಯಾಂಡ್ ಮಾಡುತ್ತಾರೆ. ದುಷ್ಟರ ಈ ಖತರ್ನಾಕ್‌ ಐಡಿಯಾಗೆ ಬೆಳಗಾವಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ : ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಅವರಿಂದ ಗಣೇಶ ಮೂರ್ತಿ ಪ್ರತಿಷ್ಠಾಪಣೆ..!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ಹೊಸ ಮಾದರಿಯಲ್ಲಿ ಸೈಬರ್ ಕ್ರೈಂ ನಡೆಯುತ್ತಿದೆ. ಇ-ಮೇಲ್, ಮೆಸೇಜ್, ಕಾಲ್ಸ್ ಅಥವಾ ವಾಟ್ಸಪ್ ಮೂಲಕ ಒಂದು ಮೆಸೇಜ್ ಬರುತ್ತದೆ. ಕ್ರೈಂ ಬ್ರ್ಯಾಂಚ್‌ನಿಂದ ಕರೆ ಮಾಡುತ್ತಿದ್ದೇವೆ. ನಿಮ್ಮ ಹೆಸರು ಕ್ರಿಮಿನಲ್ ಕೇಸ್‌ನಲ್ಲಿ ಬಂದಿದೆ. ನೀವು ನಮ್ಮ ಹತ್ತಿರ ಬರಬೇಕು ರಿಪೋರ್ಟ್ ಕೊಡಬೇಕು, ಯಾಕೆ ನೀವು ಈ ರೀತಿ ಮಾಡಿದೀರಿ ಎಂದು ಮಾತಾಡಿ ವಿಕ್ಟಿಮ್ಸ್‌ಗಳಿಗೆ ಬೆದರಿಸುತ್ತಾರೆ.

ನಾವೀಗ ನಿಮ್ಮನ್ನ ವಿಚಾರಣೆ ಮಾಡಬೇಕು ಕ್ಯಾಮೆರಾ ಮುಂದೆ ನೀವು ಬರಬೇಕು. ಬೇರೆ ಕಡೆ ನೀವು ಹೋದರೆ ನಿಮ್ಮ ಕ್ರೈಂ ಬಗ್ಗೆ ಫ್ಯಾಮಿಲಿ ಅವರಿಗೆ ಹೇಳುತ್ತೇವೆ. ಹೇಗೆ ಕ್ರೈಂ ಮಾಡಿದೀರಿ ಅಂತಾ ನಿಮ್ಮ ಬಾಡಿ ವೆರಿಫಿಕೇಶನ್ ಆಗಬೇಕು ಬಟ್ಟೆ ಬಿಚ್ಚಬೇಕು ಅಂತಾ ಹೇಳುತ್ತಾರೆ. ಬಳಿಕ ಆ ವಿಡಿಯೊ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮಾಡುತ್ತಾರೆ. ಈ ರೀತಿ ಸುಳ್ಳು ಹೇಳಿ ನಂಬಿಸಿ ಹಣ ದೋಚುವ ಕೆಲಸ ಮಾಡುತ್ತಿದ್ದಾರೆ. ಈ ರೀತಿ ಮೂರು ಪ್ರಕರಣಗಳು ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿವೆ. ಈ ರೀತಿ ಕರೆಗಳು ಬಂದು ಬ್ಲ್ಯಾಕ್ ಮೇಲ್ ಮಾಡಿದರೆ ಕೂಡಲೇ ಪೊಲೀಸರ ಗಮನಕ್ಕೆ ತನ್ನಿ ಎಂದು ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...