Bangalore News :
ಬೆಂಗಳೂರಲ್ಲಿ ಅಪ್ರಾಪ್ತರ WHEELING ಪ್ರಕರಣಗಳು ಅಧಿಕವಾಗಿವೆ. ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಇದನ್ನು ಕೆಲವರು ನಿರ್ಲಕ್ಷ್ಯಿಸುತ್ತಾರೆ. ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಡುವ ಪೋಷಕರ ವಿರುದ್ಧವೂ ಪ್ರಕರಣ ದಾಖಲಾಗಲಿದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.ಇಂದಿನ ಯುವ ಜನಾಂಗ WHEELING ಎಂಬುದನ್ನ ಸಾಹಸ ಕ್ರೀಡೆ ಎಂದು ಭಾವಿಸಿಕೊಂಡಂತಿದ್ದು, ಕೊಂಚ ಯಾಮಾರಿದರೂ ತನ್ನೊಂದಿಗೆ ಇತರ ವಾಹನ ಸವಾರರಿಗೂ ಜೀವಕ್ಕೆ ಹಾನಿಯಾಗಲಿದೆ ಎಂಬ ಕನಿಷ್ಠ ಪ್ರಜ್ಞೆಯನ್ನ ಮರೆತಿದ್ದಾರೆ.ವ್ಹೀಲಿಂಗ್ ಮಾಡುವುದು ಜೀವಕ್ಕೆ ಅಪಾಯಕಾರಿ ಎಂದು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದರೂ ಎಚ್ಚೆತ್ತುಕೊಳ್ಳದ ಸವಾರರ ಮೇಲೆ ಸಮರ ಸಾರುತ್ತಿರುವ ಟ್ರಾಫಿಕ್ ಪೊಲೀಸರು 2024ರಲ್ಲಿ 532 ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಹನ ಸವಾರರ ಬೇಜವಾಬ್ದಾರಿಯೋ ಅಥವಾ ಪೋಷಕರ ನಿರ್ಲಕ್ಷ್ಯದ ಪರಿಣಾಮ ನಗರದಲ್ಲಿ WHEELING ಪ್ರಕರಣಗಳು ಅಧಿಕಗೊಂಡಿವೆ. 2024ರಲ್ಲಿ 532, 2023ರಲ್ಲಿ 219 ಹಾಗೂ 2022ರಲ್ಲಿ 283 ಕೇಸ್ ದಾಖಲಾಗಿವೆ. ಕಳೆದ ವರ್ಷ ದಾಖಲಾಗಿದ್ದ 532 ಪ್ರಕರಣಗಳಲ್ಲಿ 530 ದ್ವಿಚಕ್ರವಾಹನಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಹಿಂದಿನ ಎರಡು ವರ್ಷಗಳಿಗೆ ಹೋಲಿಸಿದರೆ ಅಪ್ರಾಪ್ತ ದ್ವಿಚಕ್ರ ವಾಹನ ಸವಾರರ ಮೇಲೆ ದಾಖಲಾಗಿರುವ ಪ್ರಕರಣ ಐದು ಪಟ್ಟು ಹೆಚ್ಚಾಗಿದೆ.
Five-fold increase in the number of minors:ಅಪಾಯಕಾರಿ WHEELING ಕಾರ್ಯಾಚರಣೆ ವಿಶೇಷ ಕಾರ್ಯಾಚರಣೆ ನಡೆಸುವ ಪೊಲೀಸರು ಸಾಮಾಜಿಕ ಜಾಲತಾಣಗಳಾದ ಎಕ್ಸ್, ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್ಗಳ ಮೂಲಕ ಸಾರ್ವಜನಿಕರು ಕಳುಹಿಸುವ ಸವಾರರ WHEELING ವಿಡಿಯೋಗಳನ್ನ ಗಂಭೀರವಾಗಿ ಪರಿಗಣಿಸಿ ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಬಹುತೇಕ 14 ರಿಂದ 30 ವರ್ಷದೊಳಗಿನ ಸವಾರರೇ WHEELING ಮಾಡಿ ಸಿಕ್ಕಿಬಿದ್ದಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದರು.
ಅಪ್ರಾಪ್ತ ಸವಾರರ ವಿರುದ್ಧ 2022ರಲ್ಲಿ 23 ಹಾಗೂ 2023ರಲ್ಲಿ 74 ಪ್ರಕರಣಗಳು ದಾಖಲಾಗಿವೆ. 2024ರಲ್ಲಿ ಈ ಸಂಖ್ಯೆಯಲ್ಲಿ 121 ಪ್ರಕರಣಗಳು ದಾಖಲಾಗಿದ್ದು, ಎರಡು ವರ್ಷಗಳಿಗೆ ಹೋಲಿಸಿದರೆ ಪ್ರಕರಣ ಸಂಖ್ಯೆಯಲ್ಲಿ ಐದು ಪಟ್ಟು ಏರಿಕೆಯಾಗಿದೆ. ಅಪ್ರಾಪ್ತರಿಗೆ ದ್ವಿಚಕ್ರ ವಾಹನ ಕೊಟ್ಟು ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಭಾರತೀಯ ಮೋಟಾರ್ ಕಾಯ್ದೆಯಡಿ (ಐಎಂವಿ) ಪ್ರಕರಣ ದಾಖಲಿಸಿಕೊಂಡು, ತಲಾ 25 ಸಾವಿರ ದಂಡ ವಿಧಿಸಲಾಗಿದೆ. ಅಲ್ಲದೆ, ಬಾಲಾಪರಾಧ ನ್ಯಾಯ (ಮಕ್ಕಳ ಆರೈಕೆ ಹಾಗೂ ರಕ್ಷಣೆ) ತಿದ್ದುಪಡಿ ಕಾಯ್ದೆಯಡಿ ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪೋಷಕ ಹಾಗೂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಬಾಲ ನ್ಯಾಯಮಂಡಳಿಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.18 ವರ್ಷದೊಳಗಿನ ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿದ ಪರಿಣಾಮ ಪೋಷಕರು ಅಥವಾ ಮಾಲೀಕರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ 172 ಕೇಸ್ಗಳು ದಾಖಲಾಗಿವೆ. 2021ರಲ್ಲಿ 22 ಹಾಗೂ 2024ರಲ್ಲಿ 79 ಪ್ರಕರಣ ದಾಖಲಾಗಿದ್ದು, ಈ ಹಿಂದಿನ ಎರಡು ವರ್ಷಗಳಿಗೆ ಹೋಲಿಸಿದರೆ ದಾಖಲಾದ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಳವಾಗಿವೆ. ಅಲ್ಲದೆ, ಶೈಕ್ಷಣಿಕ ಸಂಸ್ಥೆಗಳಿಗೂ ತೆರಳಿ ತಿಳುವಳಿಕೆ ನೀಡಲಾಗುತ್ತಿದೆ. WHEELING ಮಾಡಿ ಸಿಕ್ಕಿಬಿದ್ದ ಅಪ್ರಾಪ್ತ ಸವಾರರ ಸಂಖ್ಯೆ ಅಧಿಕಗೊಂಡಿದ್ದು, ಈ ಸಂಬಂಧ ಪೋಷಕರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ” ಎಂದು ನಗರ ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತ ಎಂ. ಎನ್ ಅನುಚೇತ್ ತಿಳಿಸಿದ್ದಾರೆ.ವಿಚಾರಣೆಯಲ್ಲಿ ತಪ್ಪು ಎಸಗಿರುವುದು ಸಾಬೀತಾದರೆ ಗರಿಷ್ಠ 3 ವರ್ಷ ಜೈಲುಶಿಕ್ಷೆ ಹಾಗೂ ದಂಡ ಕಟ್ಟಬೇಕಿದೆ ಎಂದು ಸಂಚಾರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.”ಅಪಾಯಕಾರಿ ವ್ಹೀಲಿಂಗ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ, ಶೈಕ್ಷಣಿಕ ಸಂಸ್ಥೆಗಳಿಗೂ ತೆರಳಿ ತಿಳುವಳಿಕೆ ನೀಡಲಾಗುತ್ತಿದೆ. WHEELING ಮಾಡಿ ಸಿಕ್ಕಿಬಿದ್ದ ಅಪ್ರಾಪ್ತ ಸವಾರರ ಸಂಖ್ಯೆ ಅಧಿಕಗೊಂಡಿದ್ದು, ಈ ಸಂಬಂಧ ಪೋಷಕರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ” ಎಂದು ನಗರ ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತ ಎಂ. ಎನ್ ಅನುಚೇತ್ ತಿಳಿಸಿದ್ದಾರೆ.
ಇದ್ದನು ಓದಿರಿ :DAYTIME SLEEPINESS REASONS : ಮಧ್ಯಾಹ್ನದ ವೇಳೆ ಕೆಲಸ ಮಾಡಿದರೆ ನಿದ್ದೆ ಬರುತ್ತದೆಯೇ