spot_img
spot_img

ಕರ್ನಾಟಕದಲ್ಲಿ ಎಲ್ಲೆಲ್ಲಿ ಕಾಮಗಾರಿ ನಡೆಯುತ್ತಿದೆ; ಗುತ್ತಿಗೆದಾರರು ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹುಬ್ಬಳ್ಳಿ : ಸೆಪ್ಟೆಂಬರ್​ 10 ರಂದು ಕೋರ್ಟ್ ವೃತ್ತದ ಬಳಿ ಕರ್ತವ್ಯದ ವೇಳೆ ಫ್ಲೈಓವರ್ ಕಾಮಗಾರಿಯ ಮೇಲೆ ರಾಡ್​ ಬಿದ್ದು ಎಎಸ್​ಐ ನಾಭಿರಾಜ್ ದಯಣ್ಣವರ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಇಂದು ಚಿಕಿತ್ಸೆ ಫಲಿಸದೆ ಎಎಸ್​ಐ ನಾಭಿರಾಜ್ ದಯಣ್ಣವರ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಹವಾಮಾನ ವೈಪರೀತ್ಯ ಹೆಲಿಕಾಪ್ಟರ್ ರದ್ದು; ಪ್ರಧಾನಿ ಮೋದಿ!

ಫ್ಲೈಓವರ್ ಕಾಮಗಾರಿಯ (Flyover Construction) ರಾಡ್​ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59) (Hubballi ASI Nabhiraj Dayannavar) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ..

ಸೆಪ್ಟೆಂಬರ್​ 10ರಂದು ಕೋರ್ಟ್ ವೃತ್ತದ ಬಳಿ ಕರ್ತವ್ಯದ ವೇಳೆ ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಎಎಸ್​ಐ ನಾಭಿರಾಜ್ ದಯಣ್ಣವರ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಇಂದು ಚಿಕಿತ್ಸೆ ಫಲಿಸದೆ ಎಎಸ್​ಐ ನಾಭಿರಾಜ್ ದಯಣ್ಣವರ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದವರು ಯಾರು ? ಶಾಕಿಂಗ್ ನ್ಯೂಸ್.!

ದೂರು ನೀಡಿದ ಎಎಸ್​ಐ ನಾಭಿರಾಜ್ ದಯಣ್ಣವರ ಪುತ್ರ

ಇನ್ನು ಎಎಸ್​ಐ ನಾಭಿರಾಜ್ ದಯಣ್ಣವರ ಸಾವಿಗೆ ಸಂಬಂಧಿಸಿದಂತೆ ಅವರ ಪುತ್ರ ರುಷಭ್ ದೂರು ದಾಖಲಿಸಿದ್ದು, ಗುತ್ತಿಗೆದಾರರ ನಿರ್ಲಕ್ಷ್ಯ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂದು ಆರೋಪಿಸಿದ್ದಾರೆ. ಝಂಡು ಕನ್​ಸ್ಟ್ರಕ್ಷನ್ ನಿರ್ದೇಶಕರಾದ ರಾಮ್‌ಕುಮಾರ್, ಮೋಹಿತ್ ಮತ್ತು ಮನುದೀಪ್, ಯೋಜನಾ ನಿರ್ದೇಶಕ, ಎಂಜಿನಿಯರ್, ಸುರಕ್ಷತಾ ಅಧಿಕಾರಿ, ಕ್ರೇನ್ ಆಪರೇಟರ್ ಮತ್ತು ಕಾರ್ಮಿಕರ ವಿರುದ್ಧ ದೂರು ದಾಖಲಿಸಿದ್ದಾರೆ.

19 ಜನರ ವಿರುದ್ಧ ಪ್ರಕರಣ ದಾಖಲು

ಎಎಸ್​ಐ ನಾಭಿರಾಜ್ ದಯಣ್ಣವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ ನೀಡಿ, ಮಾಹಿತಿ ಪಡೆದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ನಾಭಿರಾಜ್ ಸಾವನ್ನಪ್ಪಿದ್ದಾರೆ.

ಪೊಲೀಸ್ ಮತ್ತು ಜಿಲ್ಲಾಡಳಿತ ಅವರನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿತು. ಆದರೆ ನಮ್ಮ ಶ್ರಮ ಫಲಿಸಲಿಲ್ಲ. ಈಗಾಗಲೇ 19 ಜನರ ಮೇಲೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗ ಎಎಸ್ಐ ಸಾವಿನಪ್ಪಿದ್ದಾರೆ. ಹೀಗಾಗಿ ಇದನ್ನು ಗಂಭೀರ ಸ್ವರೂಪದ ಪ್ರಕರಣ ಎಂದು ಪರಿಗಣಸಲಾಗುತ್ತದೆ ಎಂದು ಹೇಳಿದರು.

ಈ ಕಾಮಗಾರಿಯಲ್ಲಿ ಯಾವ ಯಾವ ಇಲಾಖೆ ಬರುತ್ತೆ, ಎಲ್ಲವೂ ಹೊಣೆ ಹೊರಬೇಕಾಗುತ್ತದೆ. ಸಂಬಂಧಿತ ಗುತ್ತಿಗೆದಾರ ಕಂಪನಿ, ಮಾಲೀಕ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಗಳ ಮೇಲೂ ಪ್ರಕರಣ ದಾಖಲಾಗುತ್ತದೆ. ಇದು ನಮ್ಮದೆ ಇಲಾಖೆ ಪ್ರಕರಣ, ಹೀಗಾಗಿ ಯಾವುದೇ ಲೋಪದೋಷವಾಗಲು ಬಿಡಲ್ಲ. ಝಾಂಡು ಕಂಪನಿಯ ಎರಡು ಕಚೇರಿಗಳು ಬಂದ್ ಆಗಿವೆ ಎಂದು ತಿಳಿಸಿದರು.

ಸಂತೋಷ್​ ಲಾಡ್​ ಸಂತಾಪ

ಎಎಸ್​ಐ ನಾಭಿರಾಜ್ ದಯಣ್ಣವರ ಗುಣಮುಖರಾಗಲು ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು. ಆದರೆ, ಈ ತರಹ ಆಗಬಾರದಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಎಸ್​ಐ ನಾಭಿರಾಜ್ ದಯಣ್ಣವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದೇನೆ. ಕರ್ನಾಟಕದಲ್ಲಿ ಎಲ್ಲೆಲ್ಲಿ ಕಾಮಗಾರಿ ನಡೆಯುತ್ತಿದೆ, ಅಲ್ಲಿ ಗುತ್ತಿಗೆದಾರರು ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

 

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...