spot_img
spot_img

ರಾಜೀನಾಮೆ ಯಾಕೆ ಕೊಡಬೇಕು..?- ಗವರ್ನರ್‌ ಪ್ರಾಸಿಕ್ಯೂಷನ್‌ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಸಿಎಂ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡದ ಬಳಿಕ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ರಾಜೀನಾಮೆ ನೀಡುವ ಮಾತೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ.. ತುರ್ತು ಸುದ್ದಿಗೋಷ್ಟಿ ನಡೆಸಿದ ಡಿ.ಕೆ ಶಿವಕುಮಾರ್‌ ಸವಾಲು; ಏನಂದ್ರು?

ನಗರದ ಅರಮನೆ ಮೈದಾನದಲ್ಲಿ ಸರ್ಕಾರಿ ನೌಕರರ ಸಂಘದ ಕಾರ್ಯಕ್ರಮ ಮುಗಿಸಿ ಹೊರಟ ಸಿಎಂ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಬಿಜೆಪಿ ಹಾಗೂ ಜೆಡಿಎಸ್ ಸೇರಿ ನನ್ನ ವಿರುದ್ಧ ಷಡ್ಯಂತ್ರ ಮಾಡಿವೆ. ರಾಜಭವನ ರಾಜಕೀಯ ದಾಳವಾಗಿ ಉಪಯೋಗಿಸಲ್ಪಟ್ಟಿದೆ. ನಾನು ರಾಜೀನಾಮೆ ನೀಡುವ ಮಾತೇ ಇಲ್ಲ, ಕಾಂಗ್ರೆಸ್ ಹೈಕಮಾಂಡ್ ಮತ್ತು ಶಾಸಕರು, ಸಚಿವರು ನನ್ನ ಪರವಾಗಿ ಇದ್ದಾರೆ. ಕಾನೂನಾತ್ಮಕ ಹೋರಾಟ ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದರು. ಇದರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಜೀನಾಮೆ ನೀಡುವ ಮಾತೇ ಇಲ್ಲ. ಇದರಲ್ಲಿ ಬಿಜೆಪಿ, ಜೆಡಿಎಸ್ ನಾಯಕರ ತಪ್ಪುಗಳು ಕೂಡ ಇವೆ, ಇದು ನನ್ನ ಮೇಲೆ ನಡೆದಿರುವ ಷಡ್ಯಂತ್ರ, ರಾಜ್ಯಪಾಲರಿಂದ ಈ ನಡೆಯನ್ನು ನಿರೀಕ್ಷೆ ಮಾಡಿರಲಿಲ್ಲ ಎಂದಿದ್ದಾರೆ.

ನನಗೆ ಮೊದಲುನ ಶೋಕಾಸ್ ನೋಟಿಸ್ ನೀಡಿದಾಗಲೇ ನಾನು ಇದನ್ನು ನಿರೀಕ್ಷೆ ಮಾಡಿದ್ದೆ. ನಿರಾಣಿ, ಜೊಲ್ಲೆ, ರೆಡ್ಡಿ ಹಾಗೂ ಹೆಚ್​​ಡಿಕೆ ಮೇಲೆಯೂ ಪ್ರಾಸಿಕ್ಯೂಷನ್ ಬಾಕಿ ಇವೆ. ಅವರನ್ನು ಬಿಟ್ಟು ನನಗೆ ಕೊಟ್ಟಿದ್ದೇಕೆ ? ನಾನು ಕಾನೂನು ಅಡಿಯಲ್ಲಿ ಹೋರಾಟ ಮಾಡುತ್ತೇನೆ, ಅನೇಕ ರಾಜ್ಯಗಳಲ್ಲಿ ಸರ್ಕಾರ ತೆಗೆಯುವ ಪ್ರಯತ್ನ ಮಾಡಿದ್ದಾರೆ. ಇಲ್ಲೂ ಹಾಗೆ ಮಾಡುತ್ತಿದ್ದಾರೆ. ರಾಜ್ಯಪಾಲರ ನಿರ್ಧಾರ ಸಂವಿಧಾನ ಬಾಹಿರ , ಹೀಗಾಗಿ ಕೋರ್ಟ್​ನಲ್ಲಿ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸುತ್ತೇವೆ, ರಾಜೀನಾಮೆ ಕೊಡುವ ತಪ್ಪು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಪ್ರತಿಕ್ರಿಯೆನ್ನು ಕೊಟ್ಟಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

VIVO V50 LAUNCHED IN INDIA:ಪ್ರೀಮಿಯಂ ಸ್ಲಿಮ್ ಡಿಸೈನ್ ದೇಶಿಯ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿವೋ, ಮಿಡಲ್ ರೇಂಜ್ನಲ್ಲಿ ಇದೇ ಟಾಪ್

Vivo V50 Launched in India News : ವಿವೋ ಇಂದು ತನ್ನ ಹೊಸ ಸ್ಮಾರ್ಟ್‌ಫೋನ್ VIVO V50 ಅನ್ನು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ....

TESLA BEGINS HIRING IN INDIA:ಮಸ್ಕ್ ಸಂಸ್ಥೆಯಲ್ಲಿ ಕೆಲಸ ಮಾಡಲು ಅದ್ಭುತ ಅವಕಾಶ

New Delhi News: ಇದರೊಂದಿಗೆ ಅಮೆರಿಕದ ದೈತ್ಯ ಎಲೆಕ್ಟ್ರಿಕಲ್​ ಕಾರು ಕಂಪನಿಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊಂದಿರುವವರಿಗೆ ಟೆಸ್ಲಾ ಸುವರ್ಣಾವಕಾಶ ನೀಡಿದೆ. ಮುಂಬೈನಲ್ಲಿ ಹಲವು ಹುದ್ದೆಗಳ...

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...