ಬೆಂಗಳೂರು: ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ವಿಲ್ಸನ್ ಗಾರ್ಡನ್ ನಾಗ ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ :Vande Bharat Train: ಹುಬ್ಬಳ್ಳಿ ಮತ್ತು ಪುಣೆ ನಡುವೆ ಒಂದೇ ಭಾರತ್ ರೈಲು!
ಸಿಸಿಬಿ ಅಧಿಕಾರಿಗಳು ಶನಿವಾರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದು, ತಪಾಸಣೆ ವೇಳೆ ವಿಲ್ಸನ್ ಗಾರ್ಡನ್ ನಾಗ ಮತ್ತು ಆತನ ಸಹಚರರ ಸುಮಾರು 18 ಮೊಬೈಲ್ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ಮೊಬೈಲ್ ಜೊತೆಗೆ ಡ್ರಗ್ಸ್ ಹಾಗೂ ಹಣವನ್ನೂ ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿಯ ಮಾಹಿತಿ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಸೂಚನೆ ನೀಡಿದ್ದರು. ತನಿಖೆ ನಡೆಸಿ ವರದಿ ನೀಡಲು ಸಿಸಿಬಿ ಹೆಚ್ಚುವರಿ ಆಯುಕ್ತ ಡಾ.ಚಂದ್ರಗುಪ್ತಗೆ ಸೂಚಿಸಿದ್ದರು.
ಇದನ್ನೂ ಓದಿ : 2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದವರು ಯಾರು ? ಶಾಕಿಂಗ್ ನ್ಯೂಸ್.!
ಕಳೆದ ತಿಂಗಳೂ ಸಿಸಿಬಿ ದಾಳಿ ಮಾಡಿತ್ತು
ಆಗಸ್ಟ್ 24 ರಂದು ಸಿಸಿಬಿ ಅಧಿಕಾರಿಗಳು ಬೆಂಗಳೂರು ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು. ದಾಳಿ ಮಾಡಿದ ಮರು ದಿನವೇ (ಆ.25) ರಂದು ಕೊಲೆ ಆರೋಪಿ ದರ್ಶನ್ ಜೈಲಿನಲ್ಲಿ ಬಲಗೈಯಲ್ಲಿ ಚಹಾ ಮತ್ತು ಎಡಗೈನಲ್ಲಿ ಸಿಗರೇಟ್ ಹಿಡಿದಿರುವ ಫೋಟೋ ವೈರಲ್ ಆಗಿತ್ತು.
ಇದು ಹಲವು ಅನುಮಾನಕ್ಕೆ ಕಾರಣವಾಗಿತ್ತು. ರಾಜಾತಿಥ್ಯ ನೀಡಿರುವ ಫೋಟೋ ವೈರಲ್ ಆದ ನಂತರ ಜೈಲು ಅಧಿಕಾರಿಗಳು ಆರೋಪಿ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶೀಫ್ಟ್ ಮಾಡಿದ್ದಾರೆ.
ಇದನ್ನೂ ಓದಿ :ತಪ್ಪೇ ಮಾಡದ ದೇವರವನ್ನು ವಶಕ್ಕೆ ಪಡೆದ ಪೋಲಿಸರು : ಫೋಟೋ ವೈರಲ್,!