ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದ್ದು, ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ.
ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ‘ಸಂಸತ್ತಿನ ಚಳಿಗಾಲದ ಅಧಿವನೇಶನಕ್ಕೂ ಮುನ್ನ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ’ ಎಂದು ತಿಳಿಸಿದ್ದಾರೆ.
ಗೌರವಾನ್ವಿತ ರಾಷ್ಟ್ರಪತಿಗಳು, ಭಾರತ ಸರ್ಕಾರದ ಶಿಫಾರಸಿನ ಮೇರೆಗೆ, ಚಳಿಗಾಲದ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು 2024 ರ ನವೆಂಬರ್ 25 ರಿಂದ ಡಿಸೆಂಬರ್ 20, 2024 ರವರೆಗೆ (ಸಂಸದೀಯ ವ್ಯವಹಾರದ ಅಗತ್ಯತೆಗಳಿಗೆ ಒಳಪಟ್ಟಿರುತ್ತದೆ) ಕರೆಯುವ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ.
ನವೆಂಬರ್ 26, 2024 ರಂದು (ಸಂವಿಧಾನ ದಿನ), ಸಂವಿಧಾನದ ಅಂಗೀಕಾರದ 75 ನೇ ವಾರ್ಷಿಕೋತ್ಸವ, ಈ ಕಾರ್ಯಕ್ರಮವನ್ನು ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ನಲ್ಲಿ ಆಚರಿಸಲಾಗುವುದು ಎಂದು ಕಿರಣ್ ರಿಜ್ಜು ತಿಳಿಸಿದ್ದಾರೆ.
ಸಂವಿಧಾನ ಅಂಗೀಕರಿಸಿ 75ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ನವೆಂಬರ್ 26ಕ್ಕೆ ಸೆಂಟ್ರಲ್ ಹಾಲ್‌ನ ಸಂವಿಧಾನ ಸದನ ಅಥವಾ ಹಳೆಯ ಸಂಸತ್ತಿನ ಕಟ್ಟಡದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಅಧಿವೇಶನ ಆರಂಭಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಒಮ್ಮತ ಮೂಡಿಸುವುದು ವಾಡಿಕೆಯಾಗಿದೆ. ಈ ಸಂದರ್ಭದಲ್ಲಿ ಸರ್ಕಾರವು ತನ್ನ ಕಾರ್ಯಸೂಚಿಯನ್ನು ಮುಂದಿಡಲಿದೆ. ವಿವಿಧ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸುವ ನಿರೀಕ್ಷೆಯಿದೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ನಂತರ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ವಕ್ಫ್ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.
ಕೇಂದ್ರ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆಯನ್ನು ಸಹ ಈ ಅಧಿವೇಶನದಲ್ಲಿ ಪರಿಚಯಿಸುವ ಸಾಧ್ಯತೆಯಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನವು ನವೆಂಬರ್ 25 ರಿಂದ ಆರಂಭವಾಗಿ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಂಗಳವಾರ ಪ್ರಕಟಿಸಿದ್ದಾರೆ. ಅಧಿವೇಶನದಲ್ಲಿ ಹಲವು ಮಹತ್ವದ ಶಾಸನಗಳ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ.