spot_img
spot_img

ಯಲ್ಲಮ್ಮನ ಗುಡ್ಡಕ್ಕೂ ಅಂತಾರಾಷ್ಟ್ರೀಯ ಮಟ್ಟದ ಆಕರ್ಷಣೆ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನಿರ್ದೇಶನ

spot_img
spot_img

Share post:

ಸವದತ್ತಿ: ತಿರುಪತಿ ಮಾದರಿಯಲ್ಲಿ ಯಲ್ಲಮ್ಮನ ಗುಡ್ಡಕ್ಕೂ ಅಂತಾರಾಷ್ಟ್ರೀಯ ಮಟ್ಟದ ಆಕರ್ಷಣೆ ತಂದುಕೊಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಉದ್ಘಾಟಿಸಿ, ಮಂಡಳಿ ಮತ್ತು ಪ್ರಾಧಿಕಾರದ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇವಸ್ಥಾನ ಹಾಗೂ ಸುತ್ತಮುಲಿನ ಸರಕಾರಿ ಜಮೀನು 1087 ಎಕರೆ ಖಾಲಿ ಜಾಗ ಒತ್ತುವರಿ ಆಗದಂತೆ ತಡೆಯಲು ಕಾಂಪೌಂಡ್‌ ನಿರ್ಮಿಸಬೇಕು. ಸಂಪೂರ್ಣ ಬಳಸಿಕೊಂಡು ಅಭಿವೃದ್ಧಿ ಪರ್ವ ಆರಂಭಿಸಬೇಕು.  ಕ್ಷೇತ್ರಕ್ಕೆ ಬರುವವರಲ್ಲಿ ಬಡವರು, ಮಧ್ಯಮ ವರ್ಗದವರು ಅವರ ವಸತಿಗೆ, ಕುಡಿಯುವ ನೀರು, ಮಹಾಪ್ರಸಾದಕ್ಕೆ, ಎತ್ತಿನ ಬಂಡಿಗಳ ಪಾರ್ಕಿಂಗ್‌ಗೆ, ಎತ್ತುಗಳ ಮೇವು- ನೀರಿಗೆ ಏನೂ ಕೊರತೆ ಆಗದಂತೆ ರೂಪುರೇಷೆ ಸಿದ್ಧಪಡಿಸಬೇಕು.

ವ್ಯಾಪಾರ-ವಹಿವಾಟು ಮಾಡುವ ಜನರಿಗೆ ಪ್ರತ್ಯೇಕ ಜಾಗ ಗುರುತಿಸಿ ಧನ ಸಹಾಯ ಕಲ್ಪಿಸಬೇಕು. ಭಕ್ತರಿಗೆ ಸುಲಭ ದರ್ಶನಕ್ಕೆ ಅವಕಾಶ ಕಲ್ಪಿಸುವುದು ಪ್ರಥಮ ಆದ್ಯತೆಯಾಗಿರಬೇಕು

ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್‌.ಕೆ.ಪಾಟೀಲ ಅವರು ಯಲ್ಲಮ್ಮ ಕ್ಷೇತ್ರಕ್ಕೆ ಆಗಮಿಸುವ ಬಹಳಷ್ಟು ಜನರು ಬಡವರು ಹಾಗೂ ಅನಕ್ಷರಸ್ಥರಾಗಿರುತ್ತಾರೆ. ಆದ್ದರಿಂದ ಸ್ವಚ್ಛತೆ, ವಸತಿ ಹಾಗೂ ಸುಗಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದ್ದು, ಪಿಪಿಪಿ ಮಾದರಿಯಲ್ಲಿವಸತಿ ವ್ಯವಸ್ಥೆ ಮಾಡಲಾಗುವುದು ಮಹಾರಾಷ್ಟ್ರದ ಭಕ್ತರೊಬ್ಬರು ಎರಡು ಎಕರೆ ಜಾಗ ನೀಡಿದರೆ ಮೂರು ಮಹಡಿಯ ವಸತಿ ಸಮುಚ್ಚಯ ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ. ನಾಲ್ಕೈದು ಎಕರೆ ಜಾಗ ಕೊಟ್ಟರೆ ನೂರಾರು ಜನರಿಗೆ ವಸತಿ ಸೌಲಭ್ಯ ಕಲ್ಪಿಸಲು ಹರ್ಷ ಶುಗರ್ಸ್‌ ಮುಂದೆ ಬಂದಿದೆ. ಮೂರು ಸಾವಿರ ಜನರು ಊಟ ಮಾಡಲು ಸರಕಾರದ ವತಿಯಿಂದಲೇ ದಾಸೋಹ ಭವನ ನಿರ್ಮಿಸಿಕೊಡಬೇಕು ಎಂದು ಸಲಹೆ ನೀಡಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...