Bangalore News:
YEDIYURAPPA POCSO CASE ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜ.15ಕ್ಕೆ ಮುಂದೂಡಿದೆ. ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ಮತ್ತಿತರರ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ಅದನ್ನು ಸ್ವೀಕರಿಸಲಾಗುವುದಿಲ್ಲ. ದೂರುದಾರ ಮಹಿಳೆ ಪದೇ ಪದೇ ದೂರು ದಾಖಲಿಸುವುದು ಅವರ ನಡುವಳಿಕೆ ತೋರಿಸುತ್ತದೆ.
ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಮತ್ತಿತರ ಪ್ರಮುಖ ವ್ಯಕ್ತಿಗಳ ವಿರುದ್ಧ ದೂರು ನೀಡುವುದು ಅಭ್ಯಾಸ ಮಾಡಿಕೊಂಡಿದ್ದರು. ಅಲ್ಲದೇ, ಗಂಡ ಮತ್ತು ಮಗನ ಮೇಲೆಯೂ ದೂರು ದಾಖಲಿಸಿದ್ದರು ಎಂದು ತಿಳಿಸಿದರು. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ 2025ರ ಜನವರಿ 15 ಕ್ಕೆ ಮುಂದೂಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿತು. ವಾದ ಆಲಿಸಿದ ಪೀಠ ವಿಚಾರಣೆ ಮುಂದೂಡಿತು.
ಇದನ್ನು ಓದಿರಿ : POSTAGE STAMPS EXHIBITION : ಬೆಳಗಾವಿಯಲ್ಲಿ ಗಮನ ಸೆಳೆದ ಅಂಚೆ ಚೀಟಿಗಳ ಪ್ರದರ್ಶನ